ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕೇಂದ್ರದ ಯೋಜನೆಗಳೇ ಗೆಲವಿಗೆ ಶ್ರೀರಕ್ಷೆ

Rashmi Kasaragodu
Updated On : 18 Mar 2014, 12:42 pm

ಕನ್ನಡಪ್ರಭ ವಾರ್ತೆ  ಸಿಂಧನೂರು  ಮಾ.17
ಹಿಂದುಳಿದ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ 371(ಜೆ) ಜಾರಿ ಮಾಡುವ ಮೂಲಕ ಈ ಭಾಗದ 25 ವರ್ಷಗಳ ಕೊರಗನ್ನು ಯುಪಿಎ ಸರ್ಕಾರ ನನಸು ಮಾಡಿದೆ. ನೀರಾವರಿ, ರೇಲ್ವೆ ಸೇರಿದಂತೆ ಪ್ರಮುಖ ಯೋಜನೆ ನನ್ನ ಆದ್ಯತೆಗಳಾಗಿವೆ. ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳೇ ತಮ್ಮ ಗೆಲವಿಗೆ ಮಹತ್ತರ ಪಾತ್ರ ವಹಿಸಲಿವೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಹಿಟ್ನಾಳ ಹೇಳಿದರು.
 ಚುನಾವಣೆ ಕುರಿತು ಪಕ್ಷದ ಮುಖಂಡರೊಂದಿಗೆ, ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚಿಸಲು ಸೋಮವಾರ ಶಾಸಕ ಹಂಪನಗೌಡ ಬಾದರ್ಲಿ ಅವರ ನಿವಾಸಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
  ಬಿಎಸ್ಸಾರ್ ಕಾಂಗ್ರೆಸ್ ಮುಖಂಡ ಕೆ.ಕರಿಯಪ್ಪ ಅವರು ಇಲ್ಲಿಯವರೆಗೆ ತಮ್ಮ ಸಂಪರ್ಕಕ್ಕೆ ಬಂದಿಲ್ಲ.  ಒಂದು ವೇಳೆ ಅವರು ಕಾಂಗ್ರೆಸ್‌ಗೆ ಬರುವುದಾದರೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಲಿಂಗಾಯತರಿಗೆ ಅನ್ಯಾಯ ಎಂಬುದು ಸರಿಯಲ್ಲ: ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಕೊಪ್ಪಳ ಕ್ಷೇತ್ರದಿಂದ ಬಸವರಾಜ ಹಿಟ್ನಾಳ ಅವರನ್ನು ಕಣಕ್ಕಿಳಿಸಲು ಹೈಕಮಾಂಡ್ ನಿರ್ಧರಿಸಿದ್ದು, ಮುಖಂಡರಲ್ಲಿ ಯಾವುದೇ ಅಸಮಾಧಾನವಿಲ್ಲ. ಸಾಮಾಜಿಕ ನ್ಯಾಯದಡಿ ಹಿಟ್ನಾಳರಿಗೆ ಟಿಕೆಟ್ ನೀಡಲಾಗಿದೆ. ಹೈ-ಕ ಭಾಗದಲ್ಲಿ ಲಿಂಗಾಯತರಿಗೆ ಅನ್ಯಾಯ ಮಾಡಲಾಗಿದೆ ಎನ್ನುವದು ಸರಿಯಲ್ಲ. ಅಮರೇಗೌಡ ಬಯ್ಯಾಪುರ ನಮ್ಮೊಂದಿಗೆ ಕೆಲಸ ಮಾಡಲಿದ್ದಾರೆ ಎಂದರು.
   ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಎನ್.ಶಿವನಾಗಪ್ಪ, ಜಿಪಂ ಸದಸ್ಯರಾದ ಚಂದೂಸಾಬ್ ಮುಳ್ಳೂರು, ಶಿವನಗೌಡ ಎಲೆಕೂಡ್ಲಿಗಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿ ಮಲ್ಲಿಕ್, ಕೊಪ್ಪಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ನಾಗರಾಜ ಸೇರಿದಂತೆ ಪಕ್ಷದ ಅನೇಕ ಮುಖಂಡರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement