ರಕ್ತದಾನ ಅತ್ಯಂತ ಶ್ರೇಷ್ಠ
ರಾಯಚೂರು: ನಗರದ ಟಾಗೋರ ಸ್ಮಾರಕ ಶಿಕ್ಷಣ ಸಂಸ್ಥೆಯ ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಕ್ತದಾನ ಶಿಬಿರ ಹಾಗೂ ರಕ್ತದ ಗುಂಪು ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ಹಾಗೂ ಯುವರೆಡ್ ಕ್ರಾಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತಭಂಡಾರದ ಅಧಿಕಾರಿ ಡಾ. ಪ್ರಸನ್ನ ಮಾತನಾಡಿ, ರಕ್ತದಾನ ಎಲ್ಲ ದಾನ ಗಳಿಗಿಂತ ಶ್ರೇಷ್ಠವಾದದ್ದು. ರಕ್ತದಾನದ ಮೂಲಕ ಮತ್ತೊಬ್ಬರ ಜೀವ ಉಳಿಸಬಬಹುದಾಗಿದೆ ಎಂದು ಹೇಳಿದರು.
ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆ ಪ್ರಧಾನ ಕಾರ್ಯದರ್ಶಿ ವಿದ್ಯಾಸಾಗರ ಚಿಣಮಗೇರಿ, ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಸಮಾಜಮುಖಿ ಕಾರ್ಯ ಮಾಡಬೇಕೆಂದರು. ಕಾಲೇಜಿನ ಪ್ರಾಚಾರ್ಯ ಎಸ್.ಎ. ಮಾಲಿಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾರಂಭದಲ್ಲಿ ಎನ್ನೆಸ್ಸೆಸ್ ಘಟಕಾಧಿಕಾರಿ ಶ್ರೀನಿವಾಸ ರಾಯಚೂರಕರ್ ಸೇರಿದಂತೆ ಅನೇಕರಿದ್ದರು. ಕಾಲೇಜಿನ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.