ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಇಂದು ಜೆಡಿಎಸ್ ಸಭೆ

Rashmi Kasaragodu
Updated On : 19 Mar 2014, 11:40 am

ದೇವದುರ್ಗ: ಜಾತ್ಯತೀತ ಜನತಾದಳದ ತಾಲೂಕು ಸಮಿತಿಯಿಂದ ಮಾ. 19ರಂದು ಸಾಮಾನ್ಯ ಸಭೆ ಕರೆಯಲಾಗಿದೆ ಎಂದು ಜೆಡಿಎಸ್ ತಿಳಿಸಿದೆ.ಈ ಕುರಿತು ಪ್ರಕಟಣೆ ನೀಡಿರುವ ಪಕ್ಷದ ಪ್ರಮುಖ ಗೋಪಾಲಕೃಷ್ಣ ಮೇಟಿ, ಅಂದು ಬೆಳಗ್ಗೆ 11ಕ್ಕೆ ಪಟ್ಟಣದ ಸಾರ್ವಜನಿಕ ಕ್ಲಬ್ ಆವರಣದಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ತಾಲೂಕು ಸಮಿತಿ ಸಾಮಾನ್ಯ ಸಭೆ ಕರೆಯಲಾಗಿದೆ. ಪಕ್ಷದ ಮುಖಂಡರು, ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.

ಸೂಕ್ತ ಸ್ಥಾನಮಾನಕ್ಕೆ ಒತ್ತಾಯ
ದೇವದುರ್ಗ: ತಾಲೂಕಿನಲ್ಲಿ ಛಲವಾದಿ ಸಮುದಾಯಕ್ಕೆ ಕಾಂಗ್ರೆಸ್ ಸೂಕ್ತ ಸ್ಥಾನಮಾನ ನೀಡುವಂತೆ ಛಲವಾದಿ ಮಹಾಸಭಾದ ತಾಲೂಕು ಅಧ್ಯಕ್ಷ ಸಿ. ಆದೆಪ್ಪ ಒತ್ತಾಯಿಸಿದ್ದಾರೆ.  ಅವರು ಈಚೆಗೆ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ರಿಗೆ ಮನವಿ ಸಲ್ಲಿಸಿ, ಛಲವಾದಿ ಸಮುದಾಯದವರು ಮೊದಲಿನಿಂದಲೂ ಕಾಂಗ್ರೆಸ್ ಬೆಂಬಲಿಗರಾಗಿದ್ದಾರೆ. ಆದರೆ ತಾಲೂಕಿನಲ್ಲಿ ಕಾಂಗ್ರೆಸ್ ಸಮಾಜಕ್ಕೆ ಅವಕಾಶ ನೀಡದೇ ಕಡೆಗಣಿಸಿದ್ದಾರೆಂದು ಆರೋಪಿಸಿದರು. ಅಧಿಕಾರ ನೀಡಿಕೆ ವೇಳೆ ಸೂಕ್ತ ಸ್ಥಾನಮಾನ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement