ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಇಂದು ಪ್ರತಿಭಟನೆ

Rashmi Kasaragodu
Updated On : 19 Mar 2014, 11:42 am

ಸಿಂಧನೂರು: ತಾಲೂಕಿನ ಪ್ರತಿಯೊಂದು ಹಳ್ಳಿ ಮತ್ತು ಕ್ಯಾಂಪ್‌ಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಮಾ.19ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಮನುಜಮತ ಬಳಗದ ಅಧ್ಯಕ್ಷ ಡಿ.ಎಚ್. ಕಂಬಳಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಬಾದರ್ಲಿ ತಿಳಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ವಿವಿಧ ಗ್ರಾಮ ಮತ್ತು ಕ್ಯಾಂಪ್‌ಗಳಿಂದ ನಗರಸಭೆ ಆವರಣದಲ್ಲಿ ಸಮಾವೇಶಗೊಂಡು ನಂತರ ಮೆರವಣಿಗೆ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತು ಅಬಕಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ನಾಳೆಯಿಂದ ಮೇಳ
ರಾಯಚೂರು: ನಗರದಲ್ಲಿ ಮಾ.20ರಿಂದ ಮಾ.25ರ ವರೆಗೆ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ.ಮೇಳವನ್ನು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮಾ. 20ರಂದು ಸಂಜೆ 5ಕ್ಕೆ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕ ಝರೆಪ್ಪ ಮೊಳಕೇರಿ, ಉಪನಿರ್ದೇಶಕ ಜವಾಹರಲಾಲ್ ಕುನ್ಸೋತ್ ಪಾಲ್ಗೊಳ್ಳುವರು.
'ಪರಿಹಾರ ನೀಡಿ'
ದೇವದುರ್ಗ: ತಾಲೂಕಿನ ವಿವಿಧೆಡೆ ಈಚೆಗೆ ಸುರಿದ ಅಕಾಲಿಕ ಮಳೆಯಿಂದ ಬೆಳೆ ಹಾನಿ ಸಂಭವಿಸಿದ್ದು ರೈತರಿಗೆ ಪರಿಹಾರ ನೀಡುವಂತೆ ತಾಲೂಕಿನ ಹೂವಿನಹೆಡ್ಗಿ, ಜೋಳದಹೆಡ್ಗಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.ಈ ಕುರಿತು ಮಂಗಳವಾರ ಗ್ರಾಮದ ರೈತರಾದ ಶಿವನಗೌಡ ಕಲ್ಮನಿ ಮತ್ತಿತರರು ತಹಸೀಲ್ದಾರ ಅವರಿಗೆ ಮನವಿ ಸಲ್ಲಿಸಿ, ತಾಲೂಕಿನಲ್ಲಿ ಸುರಿದ ಆಲಿಕಲ್ಲು ಮಳೆಯಿಂದಾಗಿ ರೈತರು ಬೆಳೆದಿದ್ದ ಮೆಣಸಿನಕಾಯಿ, ಬಿಳಿ ಜೋಳ ಮತ್ತಿತರೆ ಬೆಳೆಗಳು ಹಾಳಾಗಿವೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಪರಿಹಾರ ನೀಡಬೇಕೆಂದು ಗ್ರಾಮದ ರೈತರಾದ ಶಾಂತಗೌಡ ಪೊಲೀಸ್ ಪಾಟೀಲ್, ಮಂಜುನಾಥ, ಬಸವರಾಜ ಜೋಳದಹೆಡ್ಗಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement