ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕುರ್ಚಿ ಉಳಿಸಿಕೊಳ್ಳಲು ಡಿಕೆಶಿ ಬಿಟ್ಟುಕೊಡದ ಸಿಎಂ ಸಿದ್ದು: ವಿರೂಪಾಕ್ಷಪ್ಪ

Rashmi Kasaragodu
Updated On : 19 Mar 2014, 11:39 am

ಸಿಂಧನೂರು: ರಾಜ್ಯ ಬಿಜೆಪಿ ಸರ್ಕಾರವು ಬಳ್ಳಾರಿ ರೆಡ್ಡಿಗಳಿಂದ ನಡೆಯುತ್ತಿದೆ ಎಂದು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ ಎಂಬ ಮಹಾ ಭ್ರಷ್ಟರನ್ನು ಮಂತ್ರಿಯನ್ನಾಗಿ ಮಾಡಿಕೊಂಡಿರುವುದೇಕೆ ಎಂದು ಪ್ರಶ್ನಿಸಿರುವ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಡಿಕೆಶಿ ತಪ್ಪು ಮಾಡಿದ್ದರೂ ಸಿಎಂ ಮೌನ ಮುರಿಯದೆ ಜನತೆಗೆ ದ್ರೋಹ ಬಗೆಯುತ್ತಿದ್ದಾರೆಂದು ಟೀಕಿಸಿದ್ದಾರೆ. ತಾಲೂಕಿನ ಬಳಗಾನೂರಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ ಹಾಗೂ ಲೋಕಸಭಾ ಚುನಾವಣೆ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಹಾಲಪ್ಪಾಚಾರ್, ಬಿಜೆಪಿ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್ ಮಾತನಾಡಿದರು.
ಕಾಂಗ್ರೆಸ್ ತೊಲಗಿಸಲು ಮೋದಿ: ನಿಯೋಜಿತ ಅಭ್ಯರ್ಥಿ ಕರಡಿ ಸಂಗಣ್ಣ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷವೆಂದು ಹೇಳಿಕೊಳ್ಳುತ್ತಾ ಇಂದು ಭಾರತ ನಿರ್ಮಾಣ ಮಾಡಲು ಹೊರಟಿದೆ ಎಂದರು. ಗಿರೇಗೌಡ ಪಾಟೀಲ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅಂಕುಶದೊಡ್ಡಿ, ಜಿಪಂ ಸದಸ್ಯರಾದ ವಿಶ್ವನಾಥ ಪಾಟೀಲ್ ತೋರಣದಿನ್ನಿ, ಬಸಮ್ಮ ಕುಂಟೋಜಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement