ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ನೀತಿಸಂಹಿತೆ ಉಲ್ಲಂಘನೆ

Rashmi Kasaragodu
Updated On : 19 Mar 2014, 11:32 am

ರಾಯಚೂರು: ಲೋಕಸಭೆ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿದ್ದರೂ ಚುನಾವಣೆ ವಿಭಾಗದಿಂದ ಪೂರ್ವಾನುಮತಿಯಿಲ್ಲದೇ ಕಾರ್ಯಕರ್ತರಿಗೆ ಉಣಬಡಿಸಲು ನಗರದಲ್ಲಿ ಸಿದ್ಧಪಡಿಸಿದ್ದ ಊಟ ಹಾಗೂ ಅಡುಗೆ ಸಾಮಗ್ರಿಯನ್ನು ಪೊಲೀಸರು ಮಂಗಳವಾರ ವಶಪಡಿಸಿಕೊಂಡಿದ್ದಾರೆ.
ನಗರದ ಕೋಟೆ ಪ್ರದೇಶದ ಮುಂಗ್ಲಿ ಹನುಮಾನ್ ದೇವಸ್ಥಾನದ ಆವರಣದಲ್ಲಿ ಪೂರ್ವಾನುಮತಿಯಿಲ್ಲದೇ ಅಡುಗೆ ತಯಾರಿಸಲಾಗುತ್ತಿತ್ತು. ಇದರ ಮಾಹಿತಿ ಪಡೆದ ನೀತಿ ಸಂಹಿತೆ ಅನುಷ್ಠಾನಾಧಿಕಾರಿ ಧರ್ಮೇಂದ್ರ ಅವರು ಪೊಲೀಸ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದರು. ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಅವರ ಭೇಟಿ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಅಡುಗೆ ತಯಾರಿಸಲಾಗುತ್ತಿತ್ತು ಎಂದು ಧರ್ಮೇಂದ್ರ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement