ಮತದಾನ ನಿಮ್ಮ ಹಕ್ಕು, ಚಲಾಯಿಸಿ
ರಾಯಚೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಮತದಾರರ ಜಾಗೃತಿ ಕಾರ್ಯಕ್ರಮ ಅಂಗವಾಗಿ ನಗರದಲ್ಲಿ ಮಂಗಳವಾರ ಜಾಥಾ ಆಯೋಜಿಸಲಾಗಿತ್ತು.
ಪ್ರಭಾರಿ ಅಪರ ಜಿಲ್ಲಾಧಿಕಾರಿ ಉಮೇಶ್ ಅವರು ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಚುನಾವಣೆ ಆಯೋಗವು ಪೂರ್ಣ ಪ್ರಮಾಣದ ಮತದಾನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮತದಾರರಿಗೆ ಜಾಗೃತಿ ಮೂಡಿಸಲು ಜಾಥಾ ಆಯೋಜಿಸಲಾಗಿದೆ ಎಂದರು.
ಸ್ವೀಪ್ ಕಮಿಟಿಯಿಂದ ಆಯೋಜಿಸಿದ್ದ ಜಾಥಾ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಂಬೇಡ್ಕರ್ ವೃತ್ತದವರೆಗೆ ಸಾಗಿತು. ಜಾಥಾದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರು ಪಾಲ್ಗೊಂಡು ಕಡ್ಡಾಯ ಮತದಾನ ಮಾಡುವಂತೆ ಘೋಷಣೆ ಕೂಗಿದರು.
ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ರಾಮಾಂಜನೇಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಬಿಇಒ ಜಿ.ಮಲ್ಲಿಕಾರ್ಜುನ, ಯುನಿಸೆಫ್ ಅಧಿಕಾರಿ ರಾಘವೇಂದ್ರ ಭಟ್ ಸೇರಿ ಅನೇಕರಿದ್ದರು.