ಎನ್ನೆಸ್ಸೆಸ್ ವಿಶೇಷ ಶಿಬಿರಕ್ಕೆ ಚಾಲನೆ
ರಾಯಚೂರು: ನಗರದ ಪ್ರತಿಷ್ಠಿತ ತಾರಾನಾಥ ಶಿಕ್ಷಣ ಸಂಸ್ಥೆಯ ಲಕ್ಷೀ ವೇಂಕಟೇಶ ದೇಸಾಯಿ ಮಹಾವಿದ್ಯಾಲಯದ ಎನ್ನೆಸ್ಸೆಸ್ ಘಟಕದಿಂದ ಇತ್ತೀಚೆಗೆ ತಾಲೂಕಿನ ಅಯಾಜಪುರದಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿತ್ತು. ವಿಶೇಷ ಶಿಬಿರವನ್ನು ಗ್ರಾಮದ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವಿಜಯಶಂಕರ್ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಪ್ರೊ. ಆರ್.ಎಚ್. ಮೇರವಾಡೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯ ಕೆ. ಶ್ರೀನಿವಾಸ್, ಬಿ. ನರಸಣ್ಣ ದಳಪತಿ, ಶ್ರೀನಿವಾಸಲು, ಸಿದ್ದಣ್ಣ, ಹನುಮನಗೌಡ ಪೊಲೀಸ್ ಪಾಟೀಲ್ ಇದ್ದರು.