ವಿಶ್ವ ಜಲ ದಿನಾಚರಣೆ ಇಂದು
ರಾಯಚೂರು: ನಗರದಲ್ಲಿ ಸ್ವಾಮಿ ವಿವೇಕಾನಂದ ಯೂಥ್ ಮೂವ್ಮೆಂಟ್ ವತಿಯಿಂದ ಮಾ. 22ರಂದು ವಿಶ್ವ ನೀರಿನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11.30ಕ್ಕೆ ನಗರದ ರಂಗಮಂದಿರದಲ್ಲಿ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಸಮಾರಂಭ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಡಾ. ಸೀತಾರಾಂ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಡಿಪಿಐ ರಾಮಾಂಜನೇಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ್, ಯುನಿಸೆಫ್ನ ಜಿಲ್ಲಾ ಸಂಯೋಜಕ ರಾಘವೇಂದ್ರ ಭಟ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಎಂ.ಶೇಖರಗೌಡ ಮತ್ತಿತರರು ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಕಾರ್ಮಿಕ ಅಮರಪ್ಪ
ಸಿಂಧನೂರು: ತಾಲೂಕಿನ ಬಳಗಾನೂರು ಗ್ರಾಮದ ಸರ್ ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ಹಿರಿಯ ಸದಸ್ಯ ಅಮರಪ್ಪ ದೇವಪ್ಪ(50) ಹೃದಯಾಘಾತದಿಂದ ನಿಧನರಾದರು. ಅವರಿಗೆ ಮೂವರು ಪುತ್ರಿಯರು ಇದ್ದಾರೆ. ಅಮರಪ್ಪ ಅವರ ನಿಧನಕ್ಕೆ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಲಕ್ಷ್ಮಣ ಬೆಲ್ದಾರ, ಗೌರವಾಧ್ಯಕ್ಷ ಎಸ್.ಎಸ್. ಜಾಗೀರದಾರ, ಉಪಾಧ್ಯಕ್ಷ ಗೂಡುಸಾಬ ಹಾದಿಮನಿ, ಖಚಾಂಚಿ ಲಿಂಗಪ್ಪ ಪೂಜಾರಿ ಮತ್ತಿತರರು ಸಂತಾಪ ಸೂಚಿಸಿದ್ದಾರೆ.