ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕ್ಷಯರೋಗ ಪತ್ತೆಗೆ ಸಹಕರಿಸಿ'

Srinivasa Murthy VN
Updated On : 26 Mar 2014, 12:26 pm

ಲಿಂಗಸ್ಗೂರು: ತಾಲೂಕಿನಲ್ಲಿ ಕ್ಷಯ ರೋಗ ಪತ್ತೆ ಹಚ್ಚಲು ರೋಗದ ಗುಣಲಕ್ಷಣವುಳ್ಳ ಜನರನ್ನು ಗುರುತಿಸಿ ಡಿಎಸ್‌ಸಿ ಕೇಂದ್ರಕ್ಕೆ ಕಳುಹಿಸಿ ಕಫ ಪರೀಕ್ಷೆ ನಡೆಸಿ ಸೂಕ್ತ ಚಿಕಿತ್ಸೆ ಕೊಡಿಸಲು ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕೆಂದು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಚಂದ್ರಬಾಬು ಹೇಳಿದರು.
ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಸಾರ್ವಜನಿಕ ಆಸ್ಪತ್ರೆ ಲಿಂಗಸ್ಗೂರು ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಕ್ಷಯರೋಗ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಭಾರಿ ತಾಲೂಕು ಆರೋಗ್ಯಾಧಿಕಾರಿ ಡಾ. ಮಂಜುನಾಥ ನಾಗಲೀಕರ್ ಮಾತನಾಡಿ, ಆರೋಗ್ಯ ಇಲಾಖೆ ರೋಗ ನಿಯಂತ್ರಣದ ಬಗ್ಗೆ ವಿವಿಧ ಹಂತಗಳಲ್ಲಿ ಯೋಜನೆ ರೂಪಿಸಿ ಕಾರ್ಯನಿರ್ವಹಿಸುತ್ತಿದೆ. ಸಮುದಾಯವು ಈ ಕಾರ್ಯಕ್ರಮದ ಬಗ್ಗೆ ಸಕಾರಾತ್ಮಕ ಭಾವನೆ ಹೊಂದಿ ಯೋಜನೆಯ ಪ್ರಯೋಜನ ಪಡೆದು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಖಾಸಗಿ ವೈದ್ಯರಿಗೆ ಕಾರ್ಯಕ್ರಮದ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದು, ಯಶಸ್ವಿಗೊಳಿಸಲು ಆರೋಗ್ಯ ಕಾರ್ಯಕರ್ತರು ಪ್ರತಿ ಮನೆಗೆ ಭೇಟಿ ನೀಡಿ ಎರಡು ವಾರ ಮೇಲ್ಪಟ್ಟ ಕೆಮ್ಮು, ಜ್ವರ ಇರುವ ರೋಗಿಗಳನ್ನು ಡಿಎಸ್‌ಸಿಗೆ ಕಫ ಪರೀಕ್ಷೆಗೆ ಕಳುಹಿಸುತ್ತಿದ್ದಾರೆ ಎಂದರು. ವೈದ್ಯಾಧಿಕಾರಿ ಡಾ. ಶಿವಬಸಪ್ಪ, ಡಾ. ರುದ್ರಗೌಡ ಪಾಟೀಲ್, ಡಾ. ಹೇಮಣ್ಣ, ಡಾ. ಆದಪ್ಪ ಪಲ್ಲೇದ, ಎಆರ್‌ಟಿ ರವಿಕುಮಾರ ಹೂಗಾರ, ಇಲಾಖೆ ಸಿಬ್ಬಂದಿ ಪರಮೇಶ್ವರಪ್ಪ ಇದ್ದರು.

ಚುನಾವಣೆ: ಮತಗಟ್ಟೆಗಳ ಪರಿಶೀಲನೆ
ಮುದಗಲ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಥಳೀಯ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ಮತಗಟ್ಟೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಟ್ಟಣ ಪ್ರದೇಶದಲ್ಲಿ ಪುರಸಭೆ ಮತ್ತು ಪಪಂ. ಅಧಿಕಾರಿಗಳು ಉಸ್ತುವಾರಿ ವಹಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ(ಪಿಡಿಒ) ಈ ಜವಾಬ್ದಾರಿ ನೀಡಲಾಗಿದೆ. ಆಯಾ ಭಾಗದ ಅಧಿಕಾರಿಗಳು ಮತಗಟ್ಟೆಗಳಿಗೆ ಖುದ್ದಾಗಿ ಭೇಟಿ ನೀಡಿ ಶಾಲೆ ಕಟ್ಟಡ, ಅಂಗನವಾಡಿ ಕೇಂದ್ರಗಳು, ವಿದ್ಯುತ್ ಬೆಳಕಿನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಹತ್ತಿ ಇಳಿಯಲು ಮೆಟ್ಟಿಲು, ರ್ಯಾಂಪಿನ ವ್ಯವಸ್ಥೆಗೆ ಸಿದ್ಧತೆ ನಡೆಸಲು ಸೂಚಿಸಲಾಗಿದೆ ಎಂದು ತಹಶೀಲ್ದಾರ ಮಹಾಜನ್ ಪತ್ರಿಕೆಗೆ ತಿಳಿಸಿದರು. ಶಾಲೆಗಳಲ್ಲಿ ಪಕ್ಷದ ಹೆಸರು ಸೂಚಿಸುವ ಚಿಹ್ನೆ, ಅಕ್ಷರಗಳು ಹಾಗೂ ರಾಜಕಾರಣಿಗಳ ಭಾವಚಿತ್ರವಿದ್ದರೆ ತೆರವುಗೊಳಿಸಲು ಕ್ರಮ ಜರುಗಿಸಲಾಗುವುದೆಂದು ಚುನಾವಣಾಧಿಕಾರಿಗಳು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement