ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ

Srinivasa Murthy VN
Updated On : 27 Mar 2014, 11:24 am

ರಾಯಚೂರು: ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಬುಧವಾರ ತಮ್ಮ ನಾಮಪತ್ರ ಸಲ್ಲಿಸಿದರು.
ನಗರದ ವೀರಶೈವ ಕಲ್ಯಾಣ ಮಂಟಪದಿಂದ ತಮ್ಮ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಅವರಿಗೆ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ರಾಜುಗೌಡ, ಯಾದಗಿರಿಯ ಬಿಜೆಪಿ ಮುಖಂಡ ವೀರಬಸವಂತರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್, ತ್ರಿವಿಕ್ರಮ್ ಜೋಷಿ, ಹರವಿ ಶಂಕರಗೌಡ ಸೇರಿದಂತೆ ಸಾವಿರಾರು ಸಂಖ್ಯೆ ಕಾರ್ಯಕರ್ತರಿದ್ದರು.
ಜೆಡಿಎಸ್ ನಾಮಪತ್ರ: ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಿ.ಬಿ. ನಾಯಕ ಸಹ ನಗರದ ರಂಗಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಗೆ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯಲ್ಲಿ ಜಿಲ್ಲಾಧ್ಯಕ್ಷ ಮಹಾಂತೇಶ್ ಪಾಟೀಲ್, ಅತ್ತನೂರು, ವಿರೂಪಾಕ್ಷಿ, ಶಿವಶಂಕರ್ Ú ನಾಯಕರು ಹಾಗೂ ಕಾರ್ಯಕರ್ತರಿದ್ದರು.
ಸಂಚಾರ ಅಸ್ತವ್ಯಸ್ತ: ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಏಕಕಾಲಕ್ಕೆ ಮೆರವಣಿಗೆಯಲ್ಲಿ ಹೊರಟು ನಾಮಪತ್ರ ಸಲ್ಲಿಸಲು ಮುಂದಾಗಿದ್ದರಿಂದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಬಹುಕಾಲ ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು. ವಾಹನ ಸವಾರರು ಪರದಾಡುತ್ತಲೇ ಸಾಗುವಂತಾಯಿತು. ಎರಡೂ ಪಕ್ಷಗಳ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಸೇರಿದ್ದರಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪೊಲೀಸರು ಸಹ ನಿಯಂತ್ರಿಸಲು ಪ್ರಯಾಸಪಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement