ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ
ರಾಯಚೂರು: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಸಂಜೆ ದಿ. ಎಂ.ನಾಗಪ್ಪ ವಕೀಲರ ಪುಣ್ಯಸ್ಮರಣೆ ಹಾಗೂ ಪ್ರತಿಷ್ಠಾನದ ವಾರ್ಷಿಕೋತ್ಸವ ಮತ್ತು ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.
ಸಮಾರಂಭದಲ್ಲಿ ಆಂಧ್ರದ ವಿಶ್ರಾಂತ ನ್ಯಾಯಮೂರ್ತಿ ಡಾ. ಬಿ.ಎಸ್. ರಾಯಕೋಟೆ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ 371(ಜೆ)ನೇ ಕಲಂ ಅಡಿ ವಿಶೇಷ ಸ್ಥಾನಮಾನ ದೊರೆತಿದ್ದು ಅದರ ಸದುಪಯೋಗಕ್ಕೆ ಮನವಿ ಮಾಡಿ ದಿ.ಎಂ. ನಾಗಪ್ಪ ಅವರ ಆದರ್ಶ, ತತ್ವಗಳು ಹೋರಾಟದ ಬದುಕು ಎಲ್ಲರಿಗೂ ಮಾದರಿಯಾಗಲಿವೆ ಎಂದರು.
ಸಮಾರಂಭದಲ್ಲಿ ಮಾಜಿ ಸಚಿವ ವೈಜನಾಥ ಪಾಟೀಲ್, ಬೇಲಿಮಠದ ಶಿವರುದ್ರ ಮಹಾಸ್ವಾಮೀಜಿ, ಡಾ. ಎಂ.ನಾಗಪ್ಪ ವಕೀಲರು ಪ್ರತಿಷ್ಠಾನದ ಅಧ್ಯಕ್ಷ ಬಸಪ್ಪ ತಿಪ್ಪಾರೆಡ್ಡಿ, ಅಂಬಾಪತಿ ಪಾಟೀಲ್ ವಕೀಲರು ಸೇರಿದಂತೆ ಅನೇಕರಿದ್ದರು. ನಗರದ ಜನತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.