ಬೈಕ್ನಿಂದ ಬಿದ್ದು ವ್ಯಕ್ತಿ ಸಾವು
ರಾಯಚೂರು: ತಾಲೂಕಿನ ಕಲ್ಮಲಾ ಗ್ರಾಮದಲ್ಲಿ ಬೈಕ್ನಿಂದ ಬಿದ್ದು ವ್ಯಕ್ತಿಯೊಬ್ಬ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ. ಮೃತನನ್ನು ಬುಸಯ್ಯ ಎಂದು ಗುರುತಿಸಲಾಗಿದೆ. ಈತ ಬೈಕ್ನ ಹಿಂಬದಿ ಸೀಟಿನಲ್ಲಿ ಕುಳಿತು ಸಾಗುತ್ತಿದ್ದ ವೇಳೆ ಬೈಕ್ ಚಾಲಕ ಅತಿಯಾದ ವೇಗದಿಂದ ಬೈಕ್ ಓಡಿಸಿದ್ದು ಕಲ್ಮಲಾ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಸ್ಪೀಡ್ ಬ್ರೇಕರ್ಗಳನ್ನು ಗಮನಿಸದೇ ಚಲಾಯಿಸಿದ್ದರಿಂದ ಬೈಕ್ನಿಂದ ಕೆಳಗೆ ಬಿದ್ದ ಬುಸಯ್ಯ ತೀವ್ರ ಗಾಯಗೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.