ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ರೆಡ್‌ಕ್ರಾಸ್ ಸಂಸ್ಥೆ ಕಾರ್ಯ ಮಾದರಿ

Mainashree
Updated On : 11 May 2014, 10:55 am

ಯಾದಗಿರಿ: ರೆಡ್‌ಕ್ರಾಸ್ ಸಂಸ್ಥೆಯು ಸಾಮಾಜಿಕ ಸೇವೆಯಲ್ಲಿ ತನ್ನದೇ ಆದ ಕೊಡುಗೆ ನೀಡುವ ಮೂಲಕ ಅಮೋಘ ಕಾರ್ಯ ಮಾಡುತ್ತಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಭಗವಂತ ಅನವಾರ ಹೇಳಿದರು.
ಇಲ್ಲಿಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ರೆಡ್‌ಕ್ರಾಸ್ ಸಂಸ್ಥೆಯ ರಕ್ತ ಭಂಡಾರದಲ್ಲಿ ಈಚೆಗೆ ಆಯೋಜಿಸಿದ್ದ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಉದ್ಘಾಟಿಸಿ, ಮಾತನಾಡಿದರು. ಬಡ ಜನರಿಗೆ ವೈದ್ಯಕೀಯ ಸೇವೆ ಒದಗಿಸುವಲ್ಲಿ ಸಂಸ್ಥೆ ಶ್ರಮಿಸುತ್ತಿದೆ. ಬಡಜನರ ಕಲ್ಯಾಣಕ್ಕಾಗಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಸಂಸ್ಥೆ ಮಾಡುತ್ತಿದೆ. ಸಂಸ್ಥೆಯ ಸದಸ್ಯರೂ ಈ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸಂಸ್ಥೆಯ ಘನತೆಯನ್ನು ಎತ್ತಿ ಹಿಡಿಯುತ್ತಿದ್ದಾರೆ ಎಂದರು.
ರಕ್ತ ಭಂಡಾರ: ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ರಘುನಾಥ ರೆಡ್ಡಿ ಪಾಟೀಲ ಮಾತನಾಡಿ, ಜಿಲ್ಲೆಯ ಪ್ರಮುಖ ಅವಶ್ಯಕತೆಗಳಲ್ಲಿ ಒಂದಾದ ರಕ್ತ ಭಂಡಾರವನ್ನು ಸ್ಥಾಪಿಸುವಲ್ಲಿ ರೆಡ್‌ಕ್ರಾಸ್ ಸಂಸ್ಥೆ ಯಶಸ್ವಿಯಾಗಿದೆ. ಕಳೆದ ಫೆಬ್ರುವರಿಯಿಂದ ಇಲ್ಲಿ ರಕ್ತ ಸಂಗ್ರಹಣೆ ಮಾಡಲಾಗುತ್ತಿದ್ದು, ಲೈಸನ್ಸ್ ದೊರೆತ ತಕ್ಷಣವೇ, ಅತ್ಯಂತ ಕಡಿಮೆ ದರದಲ್ಲಿ ರಕ್ತವನ್ನು ವಿತರಿಸಲಾಗುವುದು ಎಂದರು. ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಕಾರ್ಯದರ್ಶಿ ಆನಂದ ಮಿಲ್ಟ್ರಿ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯು ಈ ಹಿಂದೆ ನೆರೆ ಹಾವಳಿಯ ಸಂದರ್ಭದಲ್ಲಿ ಸಂತ್ರಸ್ತರಿಗೆ ಸಹಾಯ ಮಾಡಿದೆ. ಇಂತಹ ಸಂಸ್ಥೆಗಳ ಸದಸ್ಯತ್ವ ಪಡೆಯುವ ಮೂಲಕ ಸಮಾಜ ಸೇವೆಗೆ ಮುಂದಾಗಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement