ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

'ಖಾತ್ರಿ' ಕೂಲಿಕಾರರಿಂದ ಗ್ರಾಪಂ ಮುತ್ತಿಗೆ

Lingaraj Badiger
Updated On : 21 May 2014, 11:19 am

 ಕ.ಪ್ರ. ವಾರ್ತೆ, ದೇವದುರ್ಗ, ಮೇ 20
ಉದ್ಯೋಗ ಖಾತ್ರಿ ಯೋಜನೆ ಅಡಿ ಕಾರ್ಯನಿರ್ವಹಿಸಿದ ಕೂಲಿಕಾರರಿಗೆ ಬಾಕಿ ಕೂಲಿ ಪಾವತಿಗೆ ಆಗ್ರಹಿಸಿ ತಾಲೂಕಿನ ಜಾಲಹಳ್ಳಿಯ ಗ್ರಾಪಂಗೆ ಕೂಲಿಕಾರ್ಮಿಕರು ಮಂಗಳವಾರ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಜಾಲಹಳ್ಳಿ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿದ ಹೋರಾಟಗಾರರು, ಕಳೆದ 8 ತಿಂಗಳಿನಿಂದ ಕೂಲಿ ಪಾವತಿಸಿಲ್ಲ. 8 ತಿಂಗಳ ಹಿಂದೆ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ಮಾಡಿದ ತಮಗೆ ಸುಮಾರು 25 ಲಕ್ಷ ಕೂಲಿ ಹಣ ನೀಡದೇ ಗ್ರಾಪಂ ಅಧಿಕಾರಿಗಳು ಸತಾಯಿಸುತ್ತಿದ್ದಾರೆಂದು ದೂರಿದರು.
ಉದ್ಯೋಗ ಖಾತ್ರಿ ಯೋಜನೆ ಅಡಿ ಗ್ರಾಪಂನಲ್ಲಿ ಹಣ ಪಾವತಿಗೆ ಅನುದಾನವಿದ್ದರೂ ಅಧಿಕಾರಿಗಳು ಶೇ.45ರಷ್ಟು ಅನುದಾನವನ್ನು ಯಂತ್ರಗಳ ಮೂಲಕ ಕಾಮಗಾರಿ ಕೈಗೊಂಡ ಗುತ್ತಿಗೆದಾರರಿಗೆ ಆ ಮೊತ್ತ ಪಾವತಿಸಿ ಕೂಲಿಕಾರರಿಗೆ ಅನುದಾನವಿಲ್ಲ ಎಂದು ಹೇಳಿ ಜಾರಿಕೊಳ್ಳುತ್ತಿದ್ದಾರೆಂದು ಆರೋಪಿಸಿದರು.
ಕಳೆದ 8 ತಿಂಗಳಿಂದ ಈ ಕುರಿತು ಒತ್ತಾಯಿಸಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಪಂಗೆ ಮುತ್ತಿಗೆ ಹಾಕಿದ್ದಾಗಿ ತಿಳಿಸಿದ ಹೋರಾಟಗಾರರು, ಈ ಕುರಿತು ಗ್ರಾಪಂ ಅಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಸಂಘಟನೆಯ ಪ್ರಮುಖರು ಹಾಗೂ ಕೂಲಿಕಾರ್ಮಿಕರು ಪಾಲ್ಗೊಂಡಿದ್ದರು.
--
ವಸತಿ ನಿಲಯಕ್ಕೆ ಅರ್ಜಿ ಆಹ್ವಾನ
ರಾಯಚೂರು: ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ವಸತಿ ನಿಲಯಗಳಿಗೆ ಪ್ರವೇಶಕ್ಕೆ ಅರ್ಹರಿಂದ ಅರ್ಜಿ ಕರೆಯಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಎಸ್.ಸಿ ಮತ್ತು ಎಸ್.ಟಿ ವಿದ್ಯಾಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ದೃಢೀಕೃತ ಜೆರಾಕ್ಸ್ ಪ್ರತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ವಾಸಸ್ಥಳ ಪ್ರಮಾಣ ಪತ್ರ, 2 ಭಾವಚಿತ್ರಗಳೊಂದಿಗೆ ಜೂ.10ರೊಳಗೆ ಅರ್ಜಿ ಸಲ್ಲಿಸಬೇಕು. ವಿವರಕ್ಕೆ ಹಿಂದುಳಿದ ವರ್ಗಗಳ ತಾಲೂಕು ವಿಸ್ತರಣಾಧಿಕಾರಿಗಳು, ರಾಯಚೂರು ಇವರನ್ನು ಸಂಪಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.
ಇಂದು ಲಸಿಕಾ ಕಾರ್ಯಪಡೆ ಸಭೆ
ರಾಯಚೂರು: ನಗರದ ಜಿಪಂನ ಜಲನಿರ್ಮಲ ಸಭಾಂಗಣದಲ್ಲಿ ಮೇ 21ರಂದು ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆ ಕರೆಯಲಾಗಿದೆ. ಅಂದು ಮಧ್ಯಾಹ್ನ 12ಕ್ಕೆ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಮಿತಿ ರಾಯಚೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಭೆಗೆ ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳು ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಲಸಿಕಾ ಕಾರ್ಯಕ್ರಮದ ವರದಿಗಳೊಂದಿಗೆ ಹಾಜರಾಗಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement