ಅರ್ಜಿ ಆಹ್ವಾನ
ಸಿಂಧನೂರು: ಬಸವ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಬಸವ ಪ್ರಸಾದ ನಿಲಯ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ನ ಆಡಳಿತಾಧಿಕಾರಿ ತಿಳಿಸಿದ್ದಾರೆ.
ಮೇ 22ರಿಂದ ನಿಲಯದ ಕಾರ್ಯಾಲಯದಲ್ಲಿ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಜೂನ್ 5 ಅರ್ಜಿ ಸಲ್ಲಿಕೆಗೆ ಕೊನೆದಿನವಾಗಿದೆ. ಶೇ. 40ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ಅರ್ಜಿಯೊಂದಿಗೆ ವರ್ಗಾವಣೆ ಪ್ರಮಾಣ ಪತ್ರ, ಅಂಕಪಟ್ಟಿ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಸಲ್ಲಿಸಬೇಕು. ಟ್ರಸ್ಟ್ ಅಡಿಯಲ್ಲಿ ನಡೆವ ಎಲ್ಬಿಕೆ ಕಾಲೇಜಿಗೆ 55 ಸೀಟ್, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ 15 ಸೀಟ್, ಪಿಯುಸಿ ವಿಜ್ಞಾನ ವಿಭಾಗ ಹಾಗೂ ಐಟಿಐಯ ತಲಾ ಐದು ವಿದ್ಯಾರ್ಥಿಗಳು, ಪದವಿ ಕಾಲೇಜಿಗೆ 20 ಸೀಟುಗಳನ್ನು ಮೀಸಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.