ಬಾಲಕ ಕಾಣೆ
ಸಿಂಧನೂರು: ತಾಲೂಕಿನ ಮೂರುಮೈಲ್ ಕ್ಯಾಂಪ್ನ ಬಾಲಕ ರವಿ(11) ಕಾಣೆಯಾಗಿದ್ದು, ತಾಯಿ ಗ್ಯಾನಮ್ಮ ದೂರಿನ ಮೇರೆಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರುಮೈಲ್ ಕ್ಯಾಂಪ್ನ ಮನೆಯಲ್ಲಿ ಮಗನನ್ನು ಬಿಟ್ಟು ಕೆಲಸಕ್ಕೆ ತೆರಳಿದ್ದು, ಸಂಜೆ ಬರುವಷ್ಟರಲ್ಲಿ ಮನೆಯಲ್ಲಿರಲಿಲ್ಲ. ಆದರೆ ಎಲ್ಲ ಕಡೆ ಹುಡುಕಿದರೂ ಪತ್ತೆಯಾಗಿಲ್ಲ ಎಂದು ಗ್ಯಾನಮ್ಮ ದೂರಿನಲ್ಲಿ ತಿಳಿಸಿದ್ದಾಳೆ.
ಸಿಂಧನೂರಿನ ಜಗನ್ಮಾತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದ ರವಿ ಸಾದಾ ಕಪ್ಪುಬಣ್ಣ, ದುಂಡುಮುಖ, ನಾಲ್ಕು ಅಡಿ ಎತ್ತರ, ಸಾಧಾರಣ ಮೈಕಟ್ಟು ಹೊಂದಿದ್ದು ಶರ್ಟ್-ಪ್ಯಾಂಟ್ ಧರಿಸಿದ್ದ. ಮಾಹಿತಿ ದೊರೆತಲ್ಲಿ ಮೊ. 9972979437ಗೆ ತಿಳಿಸಲು ಕೋರಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.