ರಂಗಸಿರಿ ಕಲಾ ಬಳಗದಿಂದ ನೃತ್ಯೋತ್ಸವ ನಾಳೆ
ರಾಯಚೂರು: ರಂಗಸಿರಿ ಕಲಾ ಬಳಗದಿಂದ ಶಾಲಾ ವಿದ್ಯಾರ್ಥಿಗಳ ನೃತ್ಯೋತ್ಸವ ಕಾರ್ಯಕ್ರಮವನ್ನು ನಗರದಲ್ಲಿ ಮೇ 25ರಂದು ಆಯೋಜಿಸಲಾಗಿದೆ ಎಂದು ಕಲಾಬಳಗದ ಅಧ್ಯಕ್ಷ ರಂಗಸ್ವಾಮಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಭಾನುವಾರ ಸಂಜೆ 6ಕ್ಕೆ ವಿದ್ಯಾರ್ಥಿಗಳಿಂದ ನೃತ್ಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದು, ಜಿಲ್ಲಾ ಸ್ಫೂರ್ತಿ ನೃತ್ಯ ಕಲಾ ಸಂಘ ಹಾಗೂ ಜಿಲ್ಲಾ ರಂಗಸಿರಿ ಸಾಂಸ್ಕೃತಿಕ ಕಲಾ ಬಳಗದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಪಾಲಕರಿಗೆ, ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಬಿ.ವಿ. ನಾಯಕ ನೆರವೇರಿಸಲಿದ್ದಾರೆ. ಮಾಜಿ ಶಾಸಕ ಎ.ಪಾಪಾರೆಡ್ಡಿ ಅಧ್ಯಕ್ಷತೆ ವಹಿಸುವರು. ನಗರಸಭೆ ಅಧ್ಯಕ್ಷೆ ಮಹಾದೇವಿ, ಉಪಾಧ್ಯಕ್ಷೆ ಪದ್ಮಾವತಿ, ಸದಸ್ಯರಾದ ಎಂ.ಪವನ ಕುಮಾರ, ಸೈಯದ್ ನೂರುದ್ದೀನ್, ವೀರೇಶ್, ಮಾಜಿ ಸದಸ್ಯ ರುದ್ರಪ್ಪ ಅಂಗಡಿ, ರಂಗಭೂಮಿ ಕಲಾವಿದ ಉರುಕುಂದಪ್ಪ ಶಕ್ತಿನಗರ ಮತ್ತಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.