ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ರಾಜ್ಯಾಧ್ಯಕ್ಷರ ಬದಲಾವಣೆಯಿಲ್ಲ

Rashmi Kasaragodu
Updated On : 26 May 2014, 11:50 am

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಿಲ್ಲ. ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿಯೇ ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸಿಕೊಂಡು ಹೋಗಲಾಗುವುದು ಎಂದು ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದರು.
  ನಗರದಲ್ಲಿ ಭಾನುವಾರ ಹೊಸದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಜೋಶಿ ಅವರ ನೇತೃತ್ವದಲ್ಲಿಯೇ ಬಿಜೆಪಿ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನದಲ್ಲಿ ಗೆದ್ದಿದೆ. ಹೀಗಾಗಿ ಮುಂದಿನ ದಿನಗಳಲ್ಲಿಯೂ ಅವರೇ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದರು.
ಬಿಎಸ್‌ವೈ ಮಾರ್ಗದರ್ಶನದಲ್ಲಿ ಸಂಘಟನೆ: ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಸಚಿವ ಸ್ಥಾನ ನೀಡುವಂತೆ ಕೋರಲಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವುದೇ ಹುದ್ದೆ ವಹಿಸಿಕೊಳ್ಳಲು ಆಸಕ್ತಿ ತೋರಿಲ್ಲ. ರಾಜ್ಯಾಧ್ಯಕ್ಷ ಪಟ್ಟವನ್ನೂ ಅವರು ಕೇಳಿಲ್ಲ. ವರಿಷ್ಠರು ನೀಡುವ ಸ್ಥಾನದ ಜವಾಬ್ದಾರಿಯನ್ನು ಅವರು ಹೊರಲಿದ್ದಾರೆ. ಅವರು ರಾಜ್ಯದ ಹಿರಿಯ ನಾಯಕರಾಗಿದ್ದು, ಅವರ ಮಾರ್ಗದರ್ಶನದಲ್ಲಿಯೇ ಪಕ್ಷ ಸಂಘಟಿಸಲಾಗುತ್ತದೆ ಎಂದು ಹೇಳಿದರು.
  ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಸಾರ್ಕ್ ಸದಸ್ಯ ರಾಷ್ಟ್ರಗಳ ಪ್ರಧಾನಿಗಳನ್ನು ಆಹ್ವಾನಿಸುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ. ಹಾಗೆಯೇ ನೆರೆಯ ದೇಶ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರನ್ನು ಆಹ್ವಾನಿಸಿ ಉತ್ತಮ ಸಂಬಂಧ ಬೆಸೆಯುವ ಪ್ರಯತ್ನ ಮಾಡಿದ್ದಾರೆಂದರು.
ಸಂಭ್ರಮ: ನವದೆಹಲಿಯಲ್ಲಿ ಸೋಮವಾರ ನಡೆಯಲಿರುವ ಪ್ರಧಾನಮಂತ್ರಿ ಮೋದಿ ಅವರ ಪ್ರಮಾಣ ವಚನ ಸಮಾರಂಭ ಇಡೀ ದೇಶವೇ ಸಂಭ್ರಮಿಸುವಂತೆ ಮಾಡಲಿದೆ. ಮೋದಿ ಸರ್ಕಾರ ಅಧಿಕಾರಕ್ಕೆ ಬರಲು ಕೋಟ್ಯಂತರ ಯುವಕರು ಶ್ರಮಿಸಿದ್ದಾರೆ. ಸಮಾರಂಭ ಹಬ್ಬದ ವಾತಾವರಣ ಸೃಷ್ಟಿಸುವುದರಲ್ಲಿ ಸಂದೇಹವಿಲ್ಲ ಎಂದರು. ಈ ಸಂದರ್ಭ ಬಿಜೆಪಿ ಮುಖಂಡರಾದ ಶಿವರಾಜ ಮರ್ಚೆಟ್ಹಾಳ್, ಬಂಡೇಶ ವಲ್ಕಂದಿನ್ನಿ, ಕಡಗೋಳ ರಾಮಚಂದ್ರ, ಚಿನ್ನಿ ಮತ್ತಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement