ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅಭಿನಂದನಾ ಕಾರ್ಯಕ್ರಮ ರದ್ದು

Lingaraj Badiger
Updated On : 5 Apr 2013, 10:46 am

ಶಿವಮೊಗ್ಗ: ಜಿಲ್ಲಾ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ವಿಪ್ರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಏಪ್ರಿಲ್ 5ರಂದು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ರದ್ದಾಗಿದೆ. ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಸನ್ಮಾನಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಜೊತೆಗೆ ಸಂಗೀತ ಕುಲಕರ್ಣಿಯವರಿಂದ ಸಂಗೀತ ಸಂಜೆ ನಡೆಯಬೇಕಾಗಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮ ರದ್ದಾಗಿದೆ ಎಂದು ಮಹಾಸಭಾ ಕಾರ್ಯದರ್ಶಿ ನಟರಾಜ ಭಾಗವತ್ ತಿಳಿಸಿದ್ದಾರೆ.
ನಾಗರಾಜ್ ಆಯ್ಕೆ
ಶಿವಮೊಗ್ಗ: ಭಾರತ-ಚೀನಾ ಮೈತ್ರಿ ಸಂಘದ ರಾಷ್ಟ್ರೀಯ ಅಧ್ಯಕ್ಷರಾಗಿ ಶಿವಮೊಗ್ಗ ವಕೀಲ ಮತ್ತು ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷ ಜಿ.ಎಸ್. ನಾಗರಾಜ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕೊಲ್ಕತ್ತಾ ನಗರದಲ್ಲಿ ನಡೆದ ಮೈತ್ರಿ ಸಂಘದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಪ್ರಕ್ರಿಯೆ ನಡೆಯಿತು. ನಾಗರಾಜ್ ಈ ವರೆಗೆ ಮೈತ್ರಿ ಸಂಘದ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಭಾರತ-ಚೀನಾ ಸಂಘಟನೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಾಗರಾಜ್ ಅವರನ್ನು ಎನ್‌ಸಿಎ ಕಾರ್ಯದರ್ಶಿ ಎಸ್.ವಿ. ತಿಮ್ಮಯ್ಯ ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.
ಜಗಜೀವನರಾಂ ಜನ್ಮದಿನಾಚರಣೆ
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಎಸ್ಸಿ ವಿಭಾಗ ಜಗಜೀವನರಾಂ ಅವರ 106ನೇ ಜನ್ಮದಿನಾಚರಣೆ ಹಮ್ಮಿಕೊಂಡಿದೆ. ಏಪ್ರಿಲ್ 5ರಂದು ಬೆಳಿಗ್ಗೆ 9.30ಕ್ಕೆ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಆಗಮಿಸುವಂತೆ ಸಂಘಟನೆ ಕೋರಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ. ಸತ್ಯನಾರಾಯಣ, ಕೆಪಿಸಿಸಿ ಉಪಾಧ್ಯಕ್ಷ ಕರಿಯಣ್ಣ ಹಾಗೂ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಖಾನ್ ಪಾಲ್ಗೊಳ್ಳುವರು ಎಂದು ಎಂ.ಎಸ್. ಸಿದ್ದಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement