ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಂಚಾರಿ ನಿಯಮ ಪಾಲಿಸದಿರುವುದೇ ಅಪಘಾತಕ್ಕೆ ಕಾರಣ: ಬಣಕಾರ್

Lingaraj Badiger
Updated On : 5 Apr 2013, 10:51 am

ಕ.ಪ್ರ. ವಾರ್ತೆ, ಶಿವಮೊಗ್ಗ, ಏ.4
ಪ್ರಸ್ತುತ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬ ವಾಹನ ಸವಾರರು ಪಾಲಿಸಲೇಬೇಕು ಎಂದು ಹಿರಿಯ ಮೋಟಾರು ವಾಹನ ನಿಯಂತ್ರಣ ಅಧಿಕಾರಿ ಎಸ್.ಜಿ. ಬಣಕಾರ್ ಹೇಳಿದರು.
ಕುವೆಂಪು ವಿಶ್ವವಿದ್ಯಾನಿಲಯ, ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಯುವ ರೆಡ್‌ಕ್ರಾಸ್ ಘಟಕ ಉದ್ಘಾಟನಾ, ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಚಾರಿ ನಿಯಮಗಳನ್ನು ಸಾರ್ವಜನಿಕರು ಪಾಲಿಸದಿರುವುದೇ ಬಹುತೇಕ ಅಪಘಾತಗಳಿಗೆ ಕಾರಣ. ಹೆಚ್ಚಾಗಿ ವಿದ್ಯಾರ್ಥಿಗಳೇ ಸಂಚಾರಿ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ದಾಖಲೆ ಜತೆಯಲ್ಲಿರಲಿ: ಪ್ರತಿಯೊಬ್ಬ ವಾಹನ ಸವಾರರು, ಚಾಲನ ಪರವಾನಗಿ ಪತ್ರ, ವಾಹನ ವಿಮೆ, ವಾಹನದ ಮೂಲ ದಾಖಲಾತಿಗಳೊಂದಿಗೆ ವಾಹನ ಚಾಲನೆ ಮಾಡಬೇಕು. ಅದರೊಂದಿಗೆ ತಮ್ಮ ಸುರಕ್ಷತೆಯನ್ನು ಮನಗಂಡು ವಾಹನ ಚಾಲನೆ ಮಾಡಬೇಕು ಎಂದ ಅವರು, ವಿದ್ಯಾರ್ಥಿಗಳು ವೇಗವಾಗಿ ಬೈಕ್ ಚಾಲನೆ ಮಾಡುವುದು ಅಪಘಾತಕ್ಕೆ ಎಡೆಮಾಡಿಕೊಡುತ್ತದೆ. ನಿಧಾನವಾಗಿ ಕ್ರಮಿಸುವುದರಿಂದ ಯಾವುದೇ ಅಪಘಾತ ನಡೆಯುವುದಿಲ್ಲ ಎಂದರು.
ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಸಂಚಾರಿ ನಿಯಮಗಳನ್ನು ಪಾಲಿಸದವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಅವಶ್ಯಕತೆಗನುಗುಣವಾಗಿ ವಾಹನಗಳನ್ನು ಉಪಯೋಗಿಸಿಕೊಳ್ಳಬೇಕು, ದುಂದು ವೆಚ್ಚಕ್ಕೆ ಅವಕಾಶ ನೀಡಬಾರದು. ಸಂಚಾರಿ ಅಧಿಕಾರಿಗಳು ವಾಹನ ತಪಾಸಣೆ ಮಾಡುವಾಗ ಯುವಕರು ಅಧಿಕಾರಿಗಳಿಂದ ತಪ್ಪಿಸಿಕೊಳ್ಳಲು ವೇಗವಾಗಿ ಚಾಲನೆ ಮಾಡಿ ಅಪಘಾತಕ್ಕಿಡಾಗುತ್ತಾರೆ. ಕಳೆದ ಕೆಲ ದಿನಗಳ ಹಿಂದೆ ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ನಡೆದ ಅಪಘಾತವೇ ಕಾರಣ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement