ಫೋಟೋ ಇಲ್ಲದವರನ್ನು ಕೈಬಿಡುವ ಪ್ರಕ್ರಿಯೆ ಸ್ಥಗಿತಗೊಳಿಸಿ
ಕ.ಪ್ರ ವಾರ್ತೆ, ಶಿವಮೊಗ್ಗ, ಏ.3
ಚುನಾವಣಾ ಆಯೋಗದಿಂದ ನೇಮಿಸಲಾದ ಅಧಿಕಾರಿಗಳಿಂದ ಮತದಾರರ ಪಟ್ಟಿಯಲ್ಲಿ ಫೋಟೋ ಇಲ್ಲದವರನ್ನು ಕೈಬಿಡಲಾಗಿದೆ. ಇಂತಹ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಬೂತ್ ಮಟ್ಟದಲ್ಲಿರುವ ಅಧಿಕಾರಿಗಳು ಮನೆ- ಮನೆಗೆ ಹೋಗಿ ಮತದಾರರ ಹೆಸರನ್ನು ಸೇರ್ಪಡೆ ಮಾಡಿಕೊಳ್ಳುವಲ್ಲಿ ನಿರ್ಲಕ್ಷ್ಯ ಹಾಗೂ ಬೇಜಾವಬ್ದಾರಿತನ ತೋರಿಸುತ್ತಿದ್ದಾರೆ.
ವಿಧಾನಸಭೆ ಚುನಾವಣೆ ದಿನಾಂಕ ಹತ್ತಿರವಾಗುತ್ತಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಲು ಇಚ್ಛಿಸುವವರ ಕುರಿತು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದರು.
ಬಿಎಲ್ಓ ಅಧಿಕಾರಿಗಳು ಮನೆ- ಮನೆಗೆ ಹೋಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳಲು ಸಂಬಂಧಪಟ್ಟವರಿಗೆ ಸೂಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಇಮ್ತಿಯಾಜ್ಖಾನ್ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.