ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಆಯೋಗಕ್ಕೆ ಉತ್ತರಿಸಿದ ಡಿಸಿಎಂ

Vishwanath S
Updated On : 14 Apr 2013, 1:02 am

ಶಿವಮೊಗ್ಗ: ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿ ಕೇಂದ್ರ ಚುನಾವಣಾ ಆಯೋಗ ನೀಡಿದ ನೋಟಿಸ್‌ಗೆ ಶನಿವಾರ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಉತ್ತರಿಸಿದ್ದಾರೆ. ಏ. 9ರಂದು ನಗರದಲ್ಲಿ ವಿಪ್ರ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ನೀಡಿ ಶನಿವಾರ ಸಂಜೆ 5 ಗಂಟೆಯೊಳಗೆ ಉತ್ತರಿಸಲು ಸೂಚಿಸಿತ್ತು. ಶಿವಮೊಗ್ಗದಲ್ಲಿದ್ದ ಈಶ್ವರಪ್ಪ ಅವರು ಆಯೋಗದ ಸೂಚನೆಯಂತೆ ಉತ್ತರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement