ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಭಗವಾನ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

Vishwanath S
Updated On : 14 Apr 2013, 1:02 am

ಕ.ಪ್ರ ವಾರ್ತೆ, ಶಿವಮೊಗ್ಗ, ಏ.13
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ವಿ. ಭಗವಾನ್ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಏ.15ರಂದು ಹೊಳೆಹೊನ್ನೂರು ಮಾರ್ಗದಿಂದ  ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ನಂತರ ಬೆಕ್ಕಿನಕಲ್ಮಠದ ಶ್ರೀಗಳಿಂದ ಅಶೀರ್ವಾದ ಪಡೆದು  ರಾಮಣ್ಣ ಶ್ರೇಷ್ಟಿ ಮಾರ್ಗವಾಗಿ ತಾಲೂಕು ಕಚೇರಿಯಲ್ಲಿನ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.
ಟಿಕೆಟ್ ನೀಡದೆ ವಂಚನೆ: ಬಿಜೆಪಿ ಮತ್ತು ಕಾಂಗ್ರೆಸ್ ನನ್ನ ಸಮಾಜ ಸೇವೆ ಗುರುತಿಸಿ ಸೂಕ್ತ ಸ್ಥಾನಮಾನ ನೀಡುವಲ್ಲಿ ವಿಫಲವಾಗಿವೆ. ಕೆಜೆಪಿ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಜನರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಅಲ್ಲದೆ   ಕಾಂಗ್ರೆಸ್‌ನಲ್ಲಿ ನಾನು ನಿರ್ವಹಿಸುತ್ತಿದ್ದ ಸಮಾಜ ಸೇವೆ ಗುರುತಿಸಿ ಬಿಜೆಪಿಯ ಅಂದಿನ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಪಕ್ಷಕ್ಕೆ ಬರ ಮಾಡಿಕೊಂಡರು. ಆದರೆ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಮಗೆ ಟಿಕೆಟ್ ನೀಡದೆ ವಂಚಿಸಿದರು ಎಂದು ಆರೋಪಿಸಿದರು.
 ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಪಕ್ಷದ ಮುಖಂಡರು ಭರವಸೆ ನೀಡಿದ್ದರು. ಆದರೆ,  ಟಿಕೆಟ್ ನೀಡಲಿಲ್ಲ. ಆದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಕ್ಷೇತ್ರದ ಗ್ರಾಮೀಣ ಭಾಗದಲ್ಲಿ  ಶಾಸಕ ಕೆ.ಜಿ. ಕುಮಾರಸ್ವಾಮಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಕ್ಷೇತ್ರದಲ್ಲಿ ಕುಮಾರಸ್ವಾಮಿ ಬಗ್ಗೆ ಅಸಮಾಧಾನವಿದೆ ಎಂದರು. ಡಾ. ಪ್ರಶಾಂತ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement