ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ನಾಗನಗೌಡ ರಾಜಿನಾಮೆ

Lingaraj Badiger
Updated On : 15 Apr 2013, 11:04 am

ಶಿರಾಳಕೊಪ್ಪ, ಬಿಜೆಪಿಯ ತಾಲೂಕು ಉಪಾಧ್ಯಕ್ಷ ನಾಗನಗೌಡ ಕೆ. ಪಾಟೀಲ್ ಮುಳಕೊಪ್ಪ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿರುವದಾಗಿ ತಿಳಿಸಿದ್ದಾರೆ.
ಶಿರಾಳಕೊಪ್ಪದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಮಂಗಳವಾರ ವಿಧಾನಸಭೆಗೆ ನಡೆಯುವ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವದಾಗಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಳೆದ ಒಂದು ವರ್ಷಗಳ ಹಿಂದೆ ಬಿಜೆಪಿ ಸೇರಿದ್ದ ಅವರು ಅಲ್ಲಿಯಾವುದೇ ಮನ್ನಣೆ ದೊರೆಯದ ಕಾರಣ ಪಕ್ಷತೊರೆಯುತ್ತಿರುವದಾಗಿ ತಿಳಿಸಿದ್ದಾರೆ. ಹಾಗೆಯೇ ಬಿಜೆಪಿ ಸೇರುವ ಮೊದಲು ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ನಾಗನಗೌಡ ಆಗ ನೂತನವಾಗಿ ಕೆಪಿಸಿಸಿ ಸದಸ್ಯರಾಗಿ ಆಯ್ಕೆ ಆಗಿದ್ದ ಶಾಂತವೀರಪ್ಪ ಗೌಡ ತಮಗೆ ಸರಿಯಾದ ರೀತಿ ಸಹಕರಿಸದೇ ಹಿಂದೆ ನಡೆದ ಜಿಪಂ, ತಾಪಂ ಚುನಾವಣೆಯಲ್ಲಿ ಸ್ಪಂದಿಸದೇ ನಿರ್ಲಕ್ಷ್ಯ ಮಾಡಿದ ಕಾರಣ ಆಗ ಕಾಂಗ್ರೆಸ್ ಪಕ್ಷ ಬಿಟ್ಟು ಬಂದಿದ್ದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement