18 ರಂದು ಕಾಗೋಡು ಹೋರಾಟ ವಿಚಾರ ಸಂಕಿರಣ
ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ತು ಏಪ್ರಿಲ್ 18 ರಂದು ಬೆಳಗ್ಗೆ 11 ಗಂಟೆಗೆ ಕಡಿದಾಳು ಮಂಜಪ್ಪ ಒಕ್ಕಲಿಗರ ಸಮುದಾಯ ಭವನದಲ್ಲಿ ಕಾಗೋಡು ಹೋರಾಟ ಕುರಿತು ಅಧ್ಯಯನ ಶಿಬಿರ ಹಾಗೂ ವಿಚಾರ ವಿನಿಮಯ ಕಾರ್ಯಕ್ರಮ ಏರ್ಪಡಿಸಿದೆ. ಕರ್ನಾಟಕ ಗಾಂಧಿ ಸ್ಮಾರಕನಿಧಿ ಅಧ್ಯಕ್ಷ ಡಾ. ಹೋ. ಶ್ರೀನಿವಾಸಯ್ಯ ಶಿಬಿರ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲ ಪ್ರೊ. ಜಿ.ಬಿ. ಶಿವರಾಜ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಜೆ. ಶಾಲಿನಿ ಪಾಲ್ಗೊಳ್ಳುವರು. ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಪ್ರೊ. ಜೆ.ಎಲ್. ಪದ್ಮನಾಭ್ ಅಧ್ಯಕ್ಷತೆ ವಹಿಸುವರು. ವಿಚಾರ ವಿನಿಮಯದಲ್ಲಿ ನಗರದ ವಿವಿಧ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.
28ರಂದು ಸಂಜೆ 6.30ಕ್ಕೆ ರಾಜೇಂದ್ರ ನಗರದ ಸಹ್ಯಾದ್ರಿ ಪ್ರೌಢಶಾಲೆಯ ಕಡಿದಾಳು ರಾಮಪ್ಪಗೌಡ ಸಭಾಂಗಣದಲ್ಲಿ ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಕೊಡುಗೆ ವಿಷಯ ಕುರಿತಂತೆ ಶೆಟ್ಟಿಹಳ್ಳಿಯ ಸರ್ಕಾರಿ ಪದವಿ ಪೂರ್ವಕಾಲೇಜು ಉಪನ್ಯಾಸಕ ಡಾ. ಬಿದರಗೋಡು ನಾಗೇಶ್, ಕವಿಗಳಾದ ಜಿಎಸ್ಎಸ್, ಕಣವಿ ಸಾಹಿತ್ಯ ಚಿಂತನೆ ಬಗ್ಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕ ಜಿ.ಎಸ್. ಅಶೋಕ ಉಪನ್ಯಾಸ ನೀಡಲಿದ್ದಾರೆ.