ಇಂದು ಬಿಜೆಪಿ ಅಭ್ಯರ್ಥಿ ನಾಮಪತ್ರ
ಶಿವಮೊಗ್ಗ: ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಬುಧವಾರ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪನವರು ಬೆಳಗ್ಗೆ 9.30ಕ್ಕೆ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕಿನಿಂದ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ, ನಂತರ ಎನ್.ಡಿ.ವಿ. ಹಾಸ್ಟೆಲ್ನಲ್ಲಿ ಕಾರ್ಯಕರ್ತರ ಸಭೆ ನಡೆಸಿ, ನಂತರ ನಾಮಪತ್ರ ಸಲ್ಲಿಸಲಿದ್ದಾರೆ. ಅವರೊಂದಿಗೆ ಮಾಜಿ ರಾಜ್ಯಪಾಲರು, ನಿವೃತ್ತ ನ್ಯಾಯಾಧೀಶರಾದ ರಾಮಾಜೋಯಿಸ್, ಸಚಿವರಾದ ಸೊಗಡು ಶಿವಣ್ಣ, ನಾರಾಯಣಸ್ವಾಮಿ ಅಲ್ಲದೇ ವಿಧಾನಪರಿಷತ್ ಸದಸ್ಯರಾದ ಪಿ.ವಿ. ಕೃಷ್ಣಭಟ್, ಎಂ.ಬಿ. ಭಾನುಪ್ರಕಾಶ್ ಮತ್ತು ಆರ್.ಕೆ. ಸಿದ್ದರಾಮಣ್ಣ ಇವರು ಜೊತೆ ನೀಡಲಿದ್ದಾರೆ.
ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರ ಅವರು ನಾಮಪತ್ರ ಸಲ್ಲಿಸಲಿದ್ದು, ಅವರೊಂದಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಜೊತೆ ನೀಡಲಿದ್ದಾರೆ.
ಶಿಕಾರಿಪುರದಲ್ಲಿ ಕೊಪ್ಪಲು ಮಂಜುನಾಥ್ ನಾಮಪತ್ರ ಸಲ್ಲಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರಾದ ಸೋಮಣ್ಣ ಬೇವಿನಮರದ ಹಾಗೂ ಎಂ.ಎ.ಡಿ.ಬಿ. ಮಾಜಿ ಅಧ್ಯಕ್ಷ ಪದ್ಮನಾಭ ಭಟ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.