ಪಕ್ಷೇತರರಾಗಿ ಸತೀಶ್ ಶೇಟ್ ಕಣಕ್ಕೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಏ.16
ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಸತೀಶ್.ಪಿ. ಶೇಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಜೆಪಿಯಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ಪ್ರಮಾಣಿಕ ಕಾರ್ಯಕರ್ತನಾಗಿ ದುಡಿಯುತ್ತಿದ್ದು, ಪಕ್ಷದ ಮುಖಂಡರು ನಮ್ಮ ಶ್ರಮಕ್ಕೆ ಯಾವುದೇ ಮನ್ನಣೆ ನೀಡಲಿಲ್ಲ. ಅಲ್ಲದೇ ಯವಕರಿಗೆ ಆದ್ಯತೆ ನೀಡದೆ ನಿರ್ಲಕ್ಷ್ಯ ತೋರುತ್ತಿದೆ. ದಶಕಗಳ ಕಾಲ ಅಧಿಕಾರ ಅನುಭವಿಸಿದರೂ ಮತ್ತೆ- ಮತ್ತೆ ಅಧಿಕಾರಕ್ಕಾಗಿ ಹಪಹಪಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ರೀತಿಯ ವರ್ತನೆಯನ್ನು ಎಲ್ಲಾ ರಾಜಕೀಯ ಪಕ್ಷಗಳು ಮಾಡುತ್ತಿದ್ದು, ಅಧಿಕಾರಕ್ಕಾಗಿ ಹಣ, ಹೆಂಡ, ಜಾತಿ ಆಧಾರದ ಮೇಲೆ ರಾಜಕೀಯ ಮಾಡುತ್ತಿವೆ.ಈ ಹಿನ್ನೆಲೆಯಲ್ಲಿ ಬೇಸತ್ತು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.