ವಿಶ್ವ ಆರೋಗ್ಯ ದಿನಾಚರಣೆ
ಭದ್ರಾವತಿ: ಭದ್ರಾವತಿ ತಾಲೂಕಿನ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆರೋಗ್ಯಾಧಿಕಾರಿ ಡಾ. ಗುಡದಪ್ಪ, ರಕ್ತದೊತ್ತಡ, ರಕ್ತದೊತ್ತಡ ಬರಲು ಕಾರಣಗಳು, ಲಕ್ಷಣಗಳು, ಕಂಡು ಹಿಡಿಯುವ ಬಗ್ಗೆ, ಅಧಿಕ ರಕ್ತದೊತ್ತಡದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳು, ಮಧುಮೇಹ ಮತ್ತು ಇತರ ರೋಗಗಳು ಬಾರದಂತೆ ತಡೆಗಟ್ಟುವ ಕ್ರಮಗಳು ಹಾಗೂ ಆಹಾರ ಪದ್ಧತಿ, ದೈಹಿಕ ಶ್ರಮ, ಮಾನಸಿಕ ಒತ್ತಡ ಕುರಿತು ಮಾಹಿತಿ ನೀಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್. ಸತ್ಯನಾರಾಯಣ, ಕೆ.ಬಿ. ರಾಜು ಮಾತನಾಡಿ, ಧೂಮಪಾನ ಮತ್ತು ಮದ್ಯಪಾನ ಸೇವನೆಯ ಮಿತಿ, ತ್ಯಜಿಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
--