ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಜಿ. ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಿಯಾಂಕ ಪ್ರಥಮ

Lingaraj Badiger
Updated On : 20 Apr 2013, 10:47 am

ಶಿಕಾರಿಪುರ: ತಾಲೂಕಿನ ತಡಸನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪ್ರಿಯಾಂಕ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾಳೆ.
ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾದ ಈಕೆ ಕ್ಲಸ್ಟರ್, ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಗಳಿಸಿದ್ದು, ಸರ್ವಜ್ಞರ 150 ಕ್ಕೂ ಅಧಿಕ ವಚನಗಳನ್ನು ಕಂಠಪಾಠದ ಮೂಲಕ ನಿರರ್ಗಳವಾಗಿ ಪಠಿಸುತ್ತಾಳೆ. ಕವನ, ಕಥೆಗಳನ್ನು ರಚಿಸಿರುವ ಪ್ರಿಯಾಂಕ ಗ್ರಾಮದ ರುದ್ರಪ್ಪ ಹಾಗೂ ಸುಮಂಗಲಿ ದಂಪತಿಯ ಪುತ್ರಿಯಾಗಿದ್ದು, ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿ ಹೊಸನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು ಈಕೆಯನ್ನು ಶಾಲೆಯ ಮುಖ್ಯೋಪಾದ್ಯಾಯ ಕಾಳಪ್ಪ, ಸಹಶಿಕ್ಷಕರು, ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಅಭಿನಂದಿಸಿ ರಾಜ್ಯ ರಾಷ್ಟ್ರಮಟ್ಟದಲ್ಲಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement