ಬಾಣಂತಿಯರ ಆರೋಗ್ಯ ತಪಾಸಣೆ
ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಏಪ್ರಿಲ್ 22ರಿಂದ 24ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಅಂಗನವಾಡಿ ಕೇಂದ್ರಗಳ 6 ವರ್ಷದೊಳಗಿನ ಮಕ್ಕಳ ತಪಾಸಣೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ಏಪ್ರಿಲ್ 22ರಂದು, ಅಂಗನವಾಡಿ ಕೇಂದ್ರಗಳಿಂದ ಹೊರಗುಳಿದ ಮಕ್ಕಳ ಆರೋಗ್ಯ ತಪಾಸಣೆಯನ್ನು ಏಪ್ರಿಲ್ 24ರಂದು, ನಗರ ಪ್ರದೇಶಗಳಲ್ಲಿ ಮಕ್ಕಳು, ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯ ತಪಾಸಣೆಯನ್ನು ಏಪ್ರಿಲ್ 26ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.