23ರಂದು ತಿಂಗಳ ಅತಿಥಿ ಕಾರ್ಯಕ್ರಮ
ಶಿವಮೊಗ್ಗ: ಕರ್ನಾಟಕ ಸಂಘ ಏ. 23ರಂದು ಸಂಜೆ 6.30ಕ್ಕೆ ಕರ್ನಾಟಕ ಸಂಘದಲ್ಲಿ ತಿಂಗಳ ಅತಿಥಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಡಾ. ಸಂಗಮೇಶ ಸವದತ್ತಿಮಠ ಅವರು ವಚನಗಳನ್ನು ಅರ್ಥೈಸುವ ಬಗೆ ಕುರಿತು ಉಪನ್ಯಾಸ ನೀಡುವರು. ಸಂಘದ ಅಧ್ಯಕ್ಷ ಎಸ್.ವಿ. ತಿಮ್ಮಯ್ಯ ಅಧ್ಯಕ್ಷತೆ ವಹಿಸುವರು.
ಪಿಎಚ್.ಡಿ ಪದವಿ
ಶಿವಮೊಗ್ಗ: ನಗರದ ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ಮಹೇಶ್ಆನಂದ ಗೌಡ ಅವರು ಕುವೆಂಪು ವಿಶ್ವವಿದ್ಯಾನಿಲಯದ ಔದ್ಯೋಗಿಕ ರಾಸಾಯನಿಕ ಶಾಸ್ತ್ರ ವಿಭಾಗದಲ್ಲಿ ಮಂಡಿಸಿದ ಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಇವರಿಗೆ ಸಹ್ಯಾದ್ರಿ ಕಾಲೇಜಿನ ರಾಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಎಚ್. ಜಯದೇವಪ್ಪ ಮಾರ್ಗದರ್ಶನ ನೀಡಿದ್ದಾರೆ ಎಂದು ಮಹೇಶ್ಆನಂದ್ ಗೌಡ ತಿಳಿಸಿದ್ದಾರೆ.