ಜಿಲ್ಲಾ ಮಟ್ಟದ ವಿಚಾರ ಸಂಕಿರಣ
ಶಿವಮೊಗ್ಗ: ಡಿಎಸ್‌ಎಫ್ ಮತ್ತು ಡಿಎಸ್‌ಎಸ್ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಏ. 21 ರಂದು ಬೆಳಿಗ್ಗೆ 10.30ರಿಂದ ಸಂಜೆ 4 ಗಂಟೆವರೆಗೆ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಏರ್ಪಡಿಸಿದೆ. ಬೆಂಗಳೂರಿನ ಜನಪರ ಕವಿ ಡಾ. ಸಿದ್ದಲಿಂಗಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಡಿವಿಎಸ್ ಸಂಜೆ ಕಾಲೇಜು ಉಪನ್ಯಾಸಕ ಪ್ರೊ.ಎಚ್. ರಾಚಪ್ಪ, ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಡಾ. ಎಂ. ರವಿನಾಯಕ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಮೈಸೂರಿನ ಜನಾರ್ದನ ಮತ್ತು ಕಲಾತಂಡ ಹಾಗೂ ಡಾ. ರಾಜೇಂದ್ರ ತಡಗ್ಲೆ ಅವರಿಂದ ಸಮೂಹ ಗಾಯನ, ನಂತರ ಮಧ್ಯಾಹ್ನ 12 ಗಂಟೆಯಿಂದ 1.30ರವರೆಗೆ ಕುವೆಂಪು ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದ ಪ್ರೊ. ರಾಜೇಂದ್ರ ಚನ್ನಿ ಅವರಿಂದ ಡಾ. ಬಿ.ಆರ್. ಅಂಬೇಡ್ಕರ್ ವಿಚಾರಗಳು ಮತ್ತು ಪ್ರಜಾಸತ್ತೆ ಹಾಗೂ ಯುವಜನರು ವಿಷಯ ಕುರಿತಂತೆ ಉಪನ್ಯಾಸ, ಮಧ್ಯಾಹ್ನ 2ರಿಂದ 3.30ರವರೆಗೆ ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ಡಾ. ಶುಭಾ ಮರವಂತೆ ಅವರು ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಮಹಿಳಾಪರ ಚಿಂತನೆಗಳು ವಿಷಯದ ಬಗ್ಗೆ ಉಪನ್ಯಾಸ ನೀಡುವರು.