ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಬಿರುಸುಗೊಂಡ ರಾಜಕೀಯ ಪಕ್ಷಗಳ ಪ್ರಚಾರ

Lingaraj Badiger
Updated On : 22 Apr 2013, 11:22 am

ಕ.ಪ್ರ.ವಾರ್ತೆ, ಶಿವಮೊಗ್ಗ, ಏ.21
ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ಅಕ್ಷರಶಃ ಬಿರುಸಾಗಿದೆ. ಎಲ್ಲಾ ಪ್ರಮುಖ ಪಕ್ಷದ ಅಭ್ಯರ್ಥಿಗಳು ಪ್ರಚಾರ ಮಾಡಲಾರಂಭಿಸಿದ್ದು, ಭಾನುವಾರ ನಗರದ ಎಲ್ಲಾ ಬಡವಾಣೆಗಳಲ್ಲೂ ಅಬ್ಬರದ ಪ್ರಚಾರ ನಡೆಸಿದರು.
ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಬಿರುಸಿನ ಪ್ರಚಾರ ನಡೆಸುತ್ತಿದ್ದು, ನಗರದ ವಿವಿಧ ಬಡಾವಣೆಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಪಾದಯಾತ್ರೆಯ ಮೂಲಕ ಕಾರ್ಯಕರ್ತರೊಂದಿಗೆ ಮತಯಾಚನೆ ಮಾಡಿದರು ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಬಿ.ಆರ್. ಮಧುಸೂಧನ ತಿಳಿಸಿದ್ದಾರೆ.
ಕಾಂಗ್ರೆಸ್: ಕಾಂಗ್ರೆಸ್ ಕೂಡ ಪ್ರಚಾರದಲ್ಲಿ ಹಿಂದೆ ಬಿದಿಲ್ಲ. ಅಭ್ಯರ್ಥಿ ಕೆ.ಬಿ. ಪ್ರಸನ್ನಕುಮಾರ್ ಅವರು ತಮ್ಮ ಬೆಂಬಲಿಗರೊಂದಿಗೆ ನಗರದ ವಿವಿಧೆಡೆ ಪ್ರಚಾರ ಸಭೆ ನಡೆಸಿ ಮತ ಯಾಚಿಸಿದರು. ಜೆಡಿಎಸ್: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯಾನಾಯ್ಕ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದರು. ಶನಿವಾರ ಶಿವಮೊಗ್ಗ ನಗರದ ಹರಿಗೆ 14ನೇ ವಾರ್ಡಿನ ಮುಖಂಡ ಎಂ. ಸುಬ್ರಮಣ್ಯ (ಮಣಿಯಣ್ಣ) ನೇತೃತ್ವದಲ್ಲಿ ಎಂ. ನಾಗರಾಜ, ನಾಗರಾಜಣ್ಣ, ಆರ್. ಭೋಮೇಶ, ಕೆ. ಪ್ರಕಾಶ್  ಇದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement