ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ರಾಘವೇಶ್ವರ ಶ್ರೀಗಳಿಗೆ ಇಂದು ಅಡಕೆ ತುಲಾಭಾರ

Rashmi Kasaragodu
Updated On : 23 Apr 2013, 11:41 am

ಕಪ್ರ ವಾರ್ತೆ, ಹೊಸನಗರ ಏ.22
ರಾಮಚಂದ್ರಾಪುರ ಮಠದಲ್ಲಿ ರಾಘವೇಶ್ವರ ಸ್ವಾಮೀಜಿಗಳ ಅಡಕೆ ತುಲಾಭಾರ, ಅಡ್ಡಪಲ್ಲಕ್ಕಿ ಉತ್ಸವ, ಕಿರೀಟೋತ್ಸವ ಮತ್ತು ಹಸ್ತಿ ದಂತ ಸಿಂಹಾಸನಾರೋಹಣ ಕಾರ್ಯಕ್ರಮ ಏ.23ರಂದು ನಡೆಯಲಿದೆ ಎಂದು ಹವ್ಯಕ ಮಹಾಮಂಡಲದ ಅಧ್ಯಕ್ಷ ಆರ್.ಎಸ್. ಹೆಗಡೆ ತಿಳಿಸಿದರು.
 ಈ ಸಂದರ್ಭದಲ್ಲಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ, ಕಿರೀಟೋತ್ಸವ, ಹಸ್ತಿದಂತ ಸಿಂಹಾಸನಾರೋಹಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರೀಮಠದಲ್ಲಿ ನಡೆಯಲಿದೆ ಎಂದರು. ಬೆಳಿಗ್ಗೆ 11.30ಕ್ಕೆ ಅಡಕೆ ತುಲಾಭಾರ, ಸಂಜೆ 7ಕ್ಕೆ ಕಿರೀಟೋತ್ಸವ, ಅಡ್ಡಪಲ್ಲಕ್ಕಿ ಉತ್ಸವದ ಮೆರವಣಿಗೆ, 7.30ಕ್ಕೆ ಪಾದಪೂಜೆ, ರಾಜೋಪಚಾರ ಸೇವೆ ಸಂಪನ್ನಗೊಳ್ಳಲಿದೆ. ನಂತರ ಶ್ರೀಗಳು ಆಶೀರ್ವಚನ ನೀಡಲಿರುವರು ಎಂದರು.
ಬಸ್ಸು ಪೈಪೋಟಿ: ಸಾರ್ವಜನಿಕರಿಗೆ ಪ್ರಾಣ ಸಂಕಟ
ಶಿವಮೊಗ್ಗ: ಖಾಸಗಿ ಬಸ್ಗಳ ನಡುವಿನ ಪೈಪೋಟಿಯಿಂದಾಗಿ ನಡೆದ ಅವಘಡದಲ್ಲಿ ಶಿವಮೊಗ್ಗದ ಪತ್ರಕರ್ತ ಸುಬ್ರಹ್ಮಣ್ಯ ಹೊರಬೈಲು ಗಾಯಗೊಂಡ ಘಟನೆ ಚೋರಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.
 ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಎರಡು ಖಾಸಗಿ ಬಸ್ಗಳ ಮೇಲೆ ಕಲ್ಲು ತೂರಿ ಗಾಜುಗಳನ್ನು ಪುಡಿಗೈದಿದ್ದಾರೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಲ ಸಮಯ ರಸ್ತೆ ಸಂಚಾರ ಅಸ್ತವ್ಯಸ್ತವಾಗಿ, ಪರಿಸ್ಥಿತಿ ಉದ್ವಿಗ್ನ ಗೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕುಂಸಿ ಠಾಣೆ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಉದ್ರಿಕ್ತ ಗ್ರಾಮಸ್ಥರನ್ನು ಸಮಾಧಾನ ಪಡಿಸಿ, ಪರಿಸ್ಥಿತಿ ತಿಳಿಗೊಳಿಸಿದರು.
ಚೋರಡಿ ಬಸ್ ನಿಲ್ದಾಣದ ಬಳಿ ಸುಬ್ರಹ್ಮಣ್ಯಅವರು ಬಸ್ ಹತ್ತುವ ವೇಳೆ ಈ ಅವಘಡ ಸಂಭವಿಸಿದೆ. ವೇಗವಾಗಿ ಬಂದ ರಾಜಲಕ್ಷ್ಮೀ ಹಾಗೂ ಲಕ್ಷ್ಮೀ ಟ್ರಾವೆಲ್ ಖಾಸಗಿ ಬಸ್ಗಳ ನಡುವೆ ಸಿಲುಕಿ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣವೇ ಗ್ರಾಮಸ್ಥರು ಇವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಎರಡು ಬಸ್ ಚಾಲಕರ ವಿರುದ್ಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement