ಇಂದು ಸುಷ್ಮ ಸ್ವರಾಜ್ ಸಾರ್ವಜನಿಕ ಸಭೆ
ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಮಾಡಲು ಏ.26ರಂದು ಲೋಕಸಭೆಯ ವಿಪಕ್ಷ ನಾಯಕಿ ಸುಷ್ಮಸ್ವರಾಜ್ ನಗರಕ್ಕೆ ಆಗಮಿಸಲಿದ್ದಾರೆ. ನಗರದ ಕುವೆಂಪು ರಂಗ ಮಂದಿರದ ಹಿಂಭಾಗದಲ್ಲಿರುವ ರಾಷ್ಟ್ರೀಯ ಶಿಕ್ಷಣ ಸಮಿತಿಯ ಕ್ರೀಡಾಂಗಣದಲ್ಲಿ ಸಂಜೆ 6 ಗಂಟೆಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಸಭೆಯಲ್ಲಿ ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ, ರಾಜ್ಯ ಬಿಜೆಪಿ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ, ವಿಧಾನಸಭಾ ಪರಿಷತ್ ಸದಸ್ಯ ಭಾನುಪ್ರಕಾಶ್, ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಕೆ.ಜಿ. ಕುಮಾರಸ್ವಾಮಿ ಪಾಲ್ಗೊಳ್ಳುವರು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಆರ್.ಕೆ. ಸಿದ್ಧರಾಮಣ್ಣ ವಹಿಸಲಿದ್ದಾರೆ.