ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಹೆಚ್ಚಳ
ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಈ ಪ್ರಕರಣಗಳ ಸಂಖ್ಯೆ 200ರ ಗಡಿ ಮುಟ್ಟಿದೆ.
ಅನುಮತಿ ಇಲ್ಲದೆ ಕರಪತ್ರ ಮುದ್ರಿಸಿ ಹಂಚಿದ ಆರೋಪ ಕುರಿತಂತೆ ಭದ್ರಾವತಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಜೆಡಿಎಸ್ ಅಭ್ಯರ್ಥಿ ಅಪ್ಪಾಜಿಗೌಡ, ಪಕ್ಷೇತರ ಅಭ್ಯರ್ಥಿ ಸಂಗಮೇಶ್ವರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿ.ಎಂ. ಇಬ್ರಾಹಿಂ ವಿರುದ್ಧ ಮಾದರಿ ನೀತಿ- ಸಂಹಿತೆ ಜಾರಿ ತಂಡದ ಅಧಿಕಾರಿಗಳು ಪೇಪರ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅನುಮತಿ ಪಡೆಯದೆ ವಾಹನ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಯು ವಿರುದ್ದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಸೊರಬ ತಾಲೂಕಿನ ಅಗಸನವಳ್ಳಿ ಬಳಿ ಟಾಟಾ ಸುಮೋ ವಾಹನದಲ್ಲಿ ಗದಗ ಮೂಲದ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೇ 1.90 ಲಕ್ಷ ಹಣವನ್ನು ಕೊಂಡೊಯ್ಯುತ್ತಿದ್ದುದನ್ನು ಪತ್ತೆ ಹಚ್ಚಿದ ಚೆಕ್ ಪೋಸ್ಟ್ ಸಿಬ್ಬಂದಿ ಹಣ ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.