ಮರಕ್ಕೆ ಕಾರು ಡಿಕ್ಕಿ: ಚಾಲಕ ಸಾವು
ಶಿವಮೊಗ್ಗ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಗರದ ಹೊರವಲಯದ ತುಪ್ಪೂರು ಹಾಗೂ ಚೋರಡಿ ನಡುವಿನ ಸನಿವಾಸ ಗ್ರಾಮದ ಬಳಿ ನಡೆದಿದೆ.
ಮಂಜುನಾಥ್ (8) ಮೃತ ಬಾಲಕ. ತುಮಕೂರು ಜಿಲ್ಲೆ ಗುಬ್ಬಿಯಿಂದ ಇಲ್ಲಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಮಾರುತಿ ಓಮ್ನಿಯಲ್ಲಿ ಸುಮಾರು 10 ಜನ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಚಾಲಕ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಡೊಡೆದಿದ್ದಾನೆ. ಈ ಸಂದರ್ಭದಲ್ಲಿ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಪ್ರಕರಣ ಕುಂಸಿ ಠಾಣೆಯಲ್ಲಿ ದಾಖಲಾಗಿದ್ದಾರೆ.