ಆಟೋ ಚಾಲಕರ ಸಮಸ್ಯೆ ಆಲಿಸಿದ ಕೆಬಿಪಿ
ಕ.ಪ್ರ.ವಾರ್ತೆ, ಶಿವಮೊಗ್ಗ, ಆ.5
ಶಾಸಕ ಕೆ.ಬಿ. ಪ್ರಸನ್ನಕುಮಾರ್ ಸೋಮವಾರ ಹೊಳೆ ಬಸ್ ನಿಲ್ದಾಣದ ಬಳಿ ಇರುವ ಆಟೋ ನಿಲ್ದಾಣಕ್ಕೆ ಭೇಟಿ ನೀಡಿ ಆಟೋ ಚಾಲಕರ ಸಮಸ್ಯೆಯನ್ನು ಆಲಿಸಿದರು.
ಈ ಸಂದರ್ಭದಲ್ಲಿ ಆಟೋ ನಿಲ್ದಾಣಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಟೋ ಚಾಲಕರು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ತಕ್ಷಣವೇ ನಗರಸಭೆ ಎಂಜಿನಿಯರ್ನ್ನು ಸಂಪರ್ಕಿಸಿ, ಆಟೋ ನಿಲ್ದಾಣಕ್ಕೆ ಸೂಕ್ತವಾದ ಸ್ಥಳವನ್ನು ಗುರುತಿಸಿ, ನಿರ್ಮಿಸಿಕೊಡುವಂತೆ ತಿಳಿಸಿದರು.
ಈ ವೇಳೆ ನಗರಸಭೆ ಸದಸ್ಯ ಕಾಶಿ ವಿಶ್ವನಾಥ್, ಆಟೋ ಚಾಲಕ ರಮೇಶ್ ಮತ್ತಿತರರು ಇದ್ದರು.