ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಮಾಜಮುಖಿ ಕಾರ್ಯ ಅಗತ್ಯ: ರಘುರಾಮ

Vishwanath S
Updated On : 8 Aug 2013, 12:13 pm

ಕ.ಪ್ರ.ವಾರ್ತೆ  ಸಾಗರ  ಆ.7 ಸರ್ಕಾರಿ ನೌಕರರು ಎಂದರೆ ಬಿಳಿಯಾನೆ ಎನ್ನುವ ಅಪವಾದವಿದ್ದು, ಸಂಘದ ಸದಸ್ಯರು ಇದನ್ನು ಹೋಗಲಾಡಿಸುವ ಕೆಲಸ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್. ರಘುರಾಮ ದೇವಾಡಿಗ ಹೇಳಿದರು.
ಇಲ್ಲಿನ ನೌಕರರ ಭವನದಲ್ಲಿ ಇತ್ತೀಚೆಗೆ ನಡೆದ ತಾಲೂಕು ಸರ್ಕಾರಿ ನೌಕರರ ಸಂಘದ ಪದಗ್ರಹಣ ಸಮಾರಂಭದಲ್ಲಿ, ಸಂಘ ನೌಕರರ ಹಿತರಕ್ಷಣೆಯ ಜೊತೆಗೆ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರಾಜ್ಯ ಸಮ್ಮೇಳನ: ಜಿಲ್ಲಾ ಸಂಘದ ಅಧ್ಯಕ್ಷನಾಗಿ ಕಳೆದ 5 ವರ್ಷದಲ್ಲಿ ಎಲ್ಲಾ ಪದಾಧಿಕಾರಿಗಳ ಹಾಗೂ ತಾಲೂಕು ಸಂಘಗಳ ಸಹಕಾರದಿಂದ ಪ್ರಥಮ ಬಾರಿಗೆ ರಾಜ್ಯ ಸಮ್ಮೇಳನ ನಡೆಸಲಾಗಿದೆ. ಇದರ ಜೊತೆಗೆ ಸುಮಾರು ರು. 2.50 ಕೋಟಿ ವೆಚ್ಚದಲ್ಲಿ ಸುಸಜ್ಜಿತ ನೌಕರರ ಭವನ ನಿರ್ಮಾಣ ಮಾಡಲಾಗಿದೆ. ಭವನದಲ್ಲಿ ಈ-ಲೈಬ್ರರಿ ಹಾಗೂ ಹವಾ ನಿಯಂತ್ರಿತ ರಂಗಮಂದಿರ ನಿರ್ಮಾಣ ಕಾರ್ಯ ಬಾಕಿ ಇದ್ದು, ಅದಕ್ಕೂ ಸಹ ಯೋಜನೆ ರೂಪಿಸಲಾಗಿದೆ ಎಂದರು.
ಶಿವಮೊಗ್ಗ ನಗರದಲ್ಲಿ ಸಿ ಹಾಗೂ ಡಿ, ದರ್ಜೆ ನೌಕರರು ನಿವೇಶನ ಖರೀದಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕಾಗಿ ನಗರದ ಹೊರ ವಲಯದಲ್ಲಿ 200 ಎಕರೆ ಜಾಗವನ್ನು ಮಾರುಕಟ್ಟೆ ದರದಲ್ಲಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ಶೇ.22ರಷ್ಟು ವ್ಯತ್ಯಾಸವಿದ್ದು, ಸಮಾನ ನೌಕರಿಗೆ ಸಮಾನ ವೇತನ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗಿದೆ ಎಂದು ಹೇಳಿದರು. ತಾಲೂಕು ಸಂಘದ ನಿಕಟಪೂರ್ವ ಅಧ್ಯಕ್ಷ ಮ.ಸ. ನಂಜುಂಡಸ್ವಾಮಿ ಮಾತನಾಡಿದರು. ತಾಲೂಕು ಸಂಘದ ಅಧ್ಯಕ್ಷ ಎಚ್.ಆರ್. ನಾಗಭೂಷಣ್ ಅಧ್ಯಕ್ಷತೆ ವಹಿಸಿದ್ದರು. ಭದ್ರಾವತಿ ಸಂಘದ ಅಧ್ಯಕ್ಷ ಎನ್. ಕೃಷ್ಣಪ್ಪ, ಸೊರಬದ ಎಂ.ಡಿ. ಹೊಳೆಲಿಂಗಪ್ಪ, ಶಿಕಾರಿಪುರದ ಎ. ಚಿನ್ನಪ್ಪ, ಸಾಗರ ಘಟಕದ ಪ್ರಧಾನ ಕಾರ್ಯದರ್ಶಿ ಜಿ. ಪರಮೇಶ್ವರ್, ಖಜಾಂಜಿ ಕೆ. ವಿಜಯಕುಮಾರ್, ಎಂ. ಮೈಲಪ್ಪ, ಪಾಲಾಕ್ಷಪ್ಪ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement