ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪಾಕ್ ಕೃತ್ಯ ಖಂಡಿಸಿ ಎಬಿವಿಪಿ ಪ್ರತಿಭಟನೆ

Vishwanath S
Updated On : 9 Aug 2013, 12:00 pm

ಕ.ಪ್ರ.ವಾರ್ತೆ, ಶಿರಾಳಕೊಪ್ಪ, ಆ.8
ಪಾಕಿಸ್ಥಾನ ಸೈನಿಕರು ನಮ್ಮ ದೇಶದ ಗಡಿಯೊಳಗೆ ನುಗ್ಗಿ ನಮ್ಮ ಯೋಧರನ್ನು ಹತ್ಯೆ ಮಾಡಿರುವ ಹೇಯ ಕ್ರತ್ಯವನ್ನು ಎಬಿವಿಪಿಯ ಸಾವಿರಾರು ಕಾರ್ಯಕರ್ತರು ತೀವ್ರವಾಗಿ ಖಂಡಿಸಿ ಪಟ್ಟಣದ ಬಸ್ ನಿಲ್ದಾಣದಲ್ಲಿ  ಕೆಲಸಮಯ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.
ಗುರುವಾರ ಬೆಳಗ್ಗೆ ಎಲ್ಲಾ ಕಾಲೇಜು ವಿದ್ಯಾರ್ಥಿಗಳು ಬ್ರಹತ್ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ  ಘೋಷಣೆ ಕೂಗಿ, ಮಾನವಸರಪಳಿ ರಚಿಸಿ, ಮೆರವಣಿಗೆಯಲ್ಲಿ ನಾಡ ಕಚೇರಿಗೆ ತೆರಳಿ, ಉಪತಹಸೀಲ್ದಾರ ಆನಂದ ಗರಡಿ ಅವರಿಗೆ ಮನವಿ ಅರ್ಪಿಸಿದರು.
ಕ್ರಮಕ್ಕೆ ಆಗ್ರಹ: ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ವಿದ್ಯಾರ್ಥಿ ನಾಯಕ ವಿನಾಯಕ ಕೇಂದ್ರ ಸರ್ಕಾರ ಪಾಕಿಸ್ಥಾನದ ಮೇಲೆ ಕ್ರಮ ಕೈಗೊಳ್ಳಲು ಮೀನಮೇಷ ಎಣಿಸುತ್ತಿದೆ. ಆದರೆ ಅಮೇರಿಕಾದ ಒಬಾಮ ಅವರು ಪಾಕಿಸ್ಥಾನದಲ್ಲಿ ಅಡಗಿದ್ದ ಬಿನ್ ಲಾಡೆನ್ನನ್ನು ಅವರ ದೇಶದ ಸೈನಿಕರು ಹತ್ಯೆ ಮಾಡಲು ಕಳಿಸಿದಾಗ ನಿಮಗೇನಾದರೂ ತೊಂದರೆ ಆದಲ್ಲಿ ಪಾಕಿಸ್ಥಾನವನ್ನು ಧ್ವಂಸ ಮಾಡುತ್ತೇವೆ ಎಂದಿದ್ದರು. ಪಾಕಿಸ್ಥಾನದ ಮೇಲೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹಾಗೆಯೇ ಪ್ರಾಮಾಣಿಕ ಐಎಎಸ್ ಅಧಿಕಾರಿ ದುರ್ಗಾಶಕ್ತಿ ಅವರನ್ನು ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಪಾಕ್ ವಿರುದ್ಧ ಕ್ರಮಕ್ಕೆ ಆಗ್ರಹ
ಶಿವಮೊಗ್ಗ: ಗಡಿಯಲ್ಲಿ ಪಾಕಿಸ್ತಾನಿ ಸೈನಿಕರು ಭಯೋತ್ಪಾದಕರೊಂದಿಗೆ ಸೇರಿ ಭಾರತೀಯ ಸೈನಿಕರನ್ನು ಹತ್ಯೆ ಮಾಡಿದ ಘಟನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಪಾಕಿಸ್ತಾನದ ವಿರುದ್ಧ ಉಗ್ರ ಕ್ರಮಕ್ಕೆ ಮುಂದಾಗಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಆಗ್ರಹಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ರಕ್ಷಣಾ ಸಚಿವ ನೀಡಿರುವ ಹೇಳಿಕೆ ಸರಿಯಲ್ಲ. ತಮ್ಮ ಹೇಳಿಕೆಗಾಗಿ ಅವರು ದೇಶದ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement