ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪರಿಸರ ಸಂರಕ್ಷಣೆ: ಯುವಕರ ಪಾತ್ರ ಮಹತ್ವದ್ದು: ಕೃಷ್ಣಮೂರ್ತಿ

Vishwanath S
Updated On : 10 Aug 2013, 12:17 pm

ಕ.ಪ್ರ.ವಾರ್ತೆ , ಬಾಳೆಹೊನ್ನೂರು ,  ಆ.9
ಮುಂದಿನ ಪೀಳಿಗೆಗೆ ಸಮೃದ್ಧ ಪ್ರಕೃತಿ ಉಳಿಸಿ ಬೆಳೆಸುವಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ ಎಂದು ನರಸಿಂಹರಾಜಪುರ ತಾಲೂಕು ಕಸಾಪ ಅಧ್ಯಕ್ಷ ಎಸ್.ಜಿ. ಕೃಷ್ಣಮೂರ್ತಿ ಹೇಳಿದ್ದಾರೆ.
ಇಲ್ಲಿನ ಬಾಳೆಹೊನ್ನೂರು ವಿದ್ಯಾಸಂಸ್ಥೆ (ಬಿಇಎಸ್) ಆವರಣದಲ್ಲಿ ಅರಣ್ಯ ಇಲಾಖೆ, ರೋಟರಿ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜ ಸೇವೆಯೇ ರೋಟರಿ ಸಂಸ್ಥೆಯ ಮುಖ್ಯ ಉದ್ದೇಶವಾಗಿದ್ದು, ನಮ್ಮ ಸುತ್ತಮುತ್ತ ಸಮೃದ್ಧ ಪರಿಸರ ಬೆಳೆಸುವಂತೆ ಸಾರ್ವಜನಿಕರನ್ನು ಪ್ರೇರೇಪಿಸುವುದೇ ಪ್ರಮುಖವಾಗಿದೆ. ವಿದ್ಯಾರ್ಥಿಗಳು ಪರಿಸರ ನಾಶವನ್ನು ತಡೆಗಟ್ಟಿ ತಮ್ಮ ಮನೆಗಳ ಬಳಿ ಹೆಚ್ಚು ಗಿಡಗಳನ್ನು ಬೆಳೆಸಬೇಕು ಎಂದು ಕರೆ ನೀಡಿದರು.
ಪರಿಸರ ಕಾಳಜಿ ಅಗತ್ಯ: ಜಿ.ಪಂ. ಸದಸ್ಯ ಮಹಮ್ಮದ್ ಇಫ್ತೆಖಾರ್ ಆದಿಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಹಿಂದೆ ರಾಜ ಮಹಾರಾಜರು ರಸ್ತೆಯ ಇಕ್ಕೆಲಗಳಲ್ಲಿ ಸಾಲು ಮರಗಳನ್ನು ನೆಡುವ ಮೂಲಕ ಪರಿಸರ ಉಳಿಸುವಲ್ಲಿ ಕಾಳಜಿ ವಹಿಸುತ್ತಿದ್ದರು. ಈ ಕಾರ್ಯ ಹಳ್ಳಿಗರು ಹಾಗೂ ರೈತರಿಂದ ಈಗ ಆಗಬೇಕಿದೆ ಎಂದರು.
ಶೇ.22.60 ರಷ್ಟು ಅರಣ್ಯ: ವಲಯ ಅರಣ್ಯಾಧಿಕಾರಿ ಸತೀಶ್ಚಂದ್ರ ಮಾತನಾಡಿ, ಮಲೆನಾಡಿನಲ್ಲಿ ರಾಷ್ಟ್ರೀಯ ಉದ್ಯಾನವನ ನೀತಿ ಅನ್ವಯ ಶೇ.33 ರಷ್ಟು ಅರಣ್ಯ ಇರಬೇಕಾದ ಅಗತ್ಯ ಇದೆ. ಆದರೆ, ಇದೀಗ ಶೇ.22.60 ರಷ್ಟು ಪ್ರದೇಶವನ್ನು ಮಾತ್ರ ಅರಣ್ಯವನ್ನು ಒಳಗೊಂಡಿದೆ. ಪರಿಸರ ಸಮತೋಲನ ಕಾಯ್ದುಕೊಳ್ಳುವ ದೃಷ್ಟಿಯಿಂದ ವನಮಹೋತ್ಸವ ಕಾರ್ಯಕ್ರಮ ಹೆಚ್ಚು ಮಹತ್ವ ಪಡೆದಿದೆ ಎಂದು ಹೇಳಿದರು.
ರೋಟರಿ ಕ್ಲಬ್ ಅಧ್ಯಕ್ಷ ಎಚ್.ಎಂ. ಇಬ್ರಾಹಿಂ ಅಧ್ಯಕ್ಷತೆ ವಹಿಸಿದ್ದರು. ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ವೈಶಾಲಿ ವಿ. ಕುಡ್ವ, ಬಿಇಎಸ್ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಬಿ.ಸಿ. ಗೀತಾ, ನರಸಿಂಹರಾಜಪುರ ತಾ.ಪಂ. ಸದಸ್ಯೆ ಬಿ.ಬಿ. ಉಮಾ, ಬಿ. ಕಣಬೂರು ಗ್ರಾ.ಪಂ. ಉಪಾಧ್ಯಕ್ಷೆ ಹೂವಮ್ಮ, ಇನ್ನರ್ ವ್ಹೀಲ್ ಕಾರ್ಯದರ್ಶಿ ವಿದ್ಯಾ.ಆರ್ ಪೈ, ಎಸ್‌ಜೆಆರ್ ಪ್ರಾಚಾರ್ಯ ಪುರುಷೋತ್ತಮ್, ರೋಟರಿ ಸಂಸ್ಥೆಯ ಕೆ.ಟಿ. ವೆಂಕಟೇಶ, ಎ.ಆರ್. ಸುರೇಂದ್ರ ಹಾಜರಿದ್ದರು.
ಸಾಂಸ್ಕೃತಿಕ ಸಂಘ: ಇಲ್ಲಿನ ಸಾಂಸ್ಕೃತಿಕ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿರುವ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಆ.8ರಂದು ನಡೆಯಲಿದೆ.
ಬಿ.ಕಣಬೂರು ಗ್ರಾ.ಪಂ.ಅಧ್ಯಕ್ಷೆ ಫಾಮಿದಾ ಬಾನು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಬಿ.ಕೆ. ಮಹಮ್ಮದ್ ಆಲಿ ಅಧ್ಯಕ್ಷತೆ ವಹಿಸಲಿದ್ದಾರೆ. ರೋಟರಿ ಅಧ್ಯಕ್ಷ ಎಚ್.ಎಂ. ಇಬ್ರಾಹಿಂ, ಜೇಸಿ ಅಧ್ಯಕ್ಷ ಮಂಜುನಾಥ್ ತುಪ್ಪೂರು, ಇನ್ನರ್ ವ್ಹೀಲ್ ಅಧ್ಯಕ್ಷೆ ವೈಶಾಲಿ ವಿ. ಕುಡ್ವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಾಳೆಹೊನ್ನೂರು ಪ್ರಾಥಮಿಕ ಕೃಷಿಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಸುಧಾಕರ್ ವಿಜೇತರಿಗೆ ಬಹುಮಾನ ವಿತರಿಸಲಿದ್ದು, ಜಿ.ಪಂ. ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ, ಜಿ.ಪಂ. ಸದಸ್ಯ ಮಹಮ್ಮದ್ ಇಫ್ತೆಖಾರ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement