ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಇಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ

Vishwanath S
Updated On : 11 Aug 2013, 12:25 pm

ಕ.ಪ್ರ.ವಾರ್ತೆ  ,  ಭದ್ರಾವತಿ  ,   ಆ.10
ಲಯನ್ಸ್, ಲಯನೆಸ್ ಮತ್ತು ಲಿಯೋ ಕ್ಲಬ್‌ಗಳ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆ.11ರಂದು ಉಂಬ್ಳೇಬೈಲು ರಸ್ತೆಯಲ್ಲಿರುವ ಲಯನ್ಸ್ ಸಭಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.
ಸಾಮಾನ್ಯಜ್ಞಾನ ಮತ್ತು ಭಾರತದ ಸ್ವಾತಂತ್ರ್ಯ ಸಂಗ್ರಾಮ ಹಾಗೂ ಹೋರಾಟಗಾರರ ಬಗ್ಗೆ ವಸ್ತುನಿಷ್ಠ ಪ್ರಶ್ನೆಗಳ ಲಿಖಿತ ಪರೀಕ್ಷೆ, ದೇಶಭಕ್ತಿ ಗೀತೆಗಳ ಸ್ಪರ್ಧೆ ಏರ್ಪಡಿಸಲಾಗಿದೆ. ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ನಮ್ಮ ಹೊಣೆ ವಿಷಯ ಕುರಿತ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಕಬ್ ಪ್ರಕಟಣೆ ತಿಳಿಸಿದೆ.
ಈ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಆ.15ರಂದು ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಮಾಣಪತ್ರ ಮತ್ತು ಬಹುಮಾನಗಳನ್ನು ನೀಡಲಾಗುವುದು. ಆ.15ರ ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮವು 8.50ಕ್ಕೆ ನಡೆಯಲಿದ್ದು ನಂತರ ನ್ಯೂಟೌನ್ ಬಾಲಕಿಯರ ಪ.ಪೂ. ಕಾಲೇಜಿನ ಆವರಣ ಮತ್ತು ಲಯನ್ಸ್ ಕ್ಲಬ್ ಅರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ಭದ್ರಾವತಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಗಳ ಅಡಿಯಲ್ಲಿ ನಿರ್ಮಿಸಿರುವ ಆಸನಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement