ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

'ಸ್ವೇಚ್ಛಾಚಾರವೇ ಸ್ವಾತಂತ್ರ್ಯವಲ್ಲ'

Lingaraj Badiger
Updated On : 16 Aug 2013, 11:02 am

ಕ.ಪ್ರ.ವಾರ್ತೆ  ಭದ್ರಾವತಿ  ಆ.15
ಸ್ವಾತಂತ್ರ್ಯವೆಂದರೆ ಸ್ವೇಚ್ಛೆಯಿಂದ ವರ್ತಿಸುವುದೆಂಬ ಅರ್ಥವಲ್ಲ. ನಮ್ಮ ವರ್ತನೆಯಿಂದ ಇತರರ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳುವುದು ಮಾನವೀಯತೆ ಅಲ್ಲ ಎಂದು ಶಾಸಕ ಎಂ.ಜೆ. ಅಪ್ಪಾಜಿ ಹೇಳಿದರು.  ಅವರು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಪಟ್ಟಣದ ಕನಕ ಮಂಟಪ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ 67ನೇ ಸ್ವಾತಂತ್ರ್ಯ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಂಜೂರಾತಿ ದೊರಕಬೇಕು: ಭದ್ರಾವತಿ ಕ್ಷೇತ್ರದ ಆರ್ಥಿಕ ಪರಿಸ್ಥಿತಿ ಕ್ಷೇತ್ರದ 2 ಪ್ರತಿಷ್ಠಿತ ಕಾರ್ಖಾನೆಗಳಾದ ವಿಐಎಸ್‌ಎಲ್ ಮತ್ತು ಎಂಪಿಎಂಗಳ ಸಂಕಷ್ಟದ ಸ್ಥಿತಿಯಿಂದ ಕಠಿಣವಾಗಿದೆ. ಎರಡೂ ಕಾರ್ಖಾನೆಗಳ ನವೀಕರಣವಾಗಬೇಕಿದೆ ಮತ್ತು ವಿಐಎಸ್‌ಎಲ್ ಕಾರ್ಖಾನೆಗೆ ಕಬ್ಬಿಣದ ಅದಿರಿನ ಗಣಿಯ ಮಂಜೂರಾತಿ ದೊರಕಬೇಕಾಗಿದೆ ಎಂದರು.
 ತಹಸೀಲ್ದಾರ್ ಸಿದ್ದಮಲ್ಲಪ್ಪ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನೋತ್ಸವದ ಸಂದೇಶ ವಾಚಿಸಿದರು.
 ಪೊಲೀಸ್, ಗೃಹರಕ್ಷಕ ದಳ, ಎನ್.ಸಿ.ಸಿ, ಶಾಲಾ ವಿದ್ಯಾರ್ಥಿಗಳು ಪಥಸಂಚಲನ ನಡೆಸಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ತಾಪಂ ಅಧ್ಯಕ್ಷೆ ಜಮರುದ್ ಖಾನು, ಉಪಾಧ್ಯಕ್ಷೆ ಗೌರಮ್ಮ, ಎಪಿಎಂಸಿ ಅಧ್ಯಕ್ಷ ಎಸ್. ಮಣಿಶೇಖರ್, ಉಪಾಧ್ಯಕ್ಷ ಲಕ್ಷ್ಮಣಪ್ಪ, ಜಿಪಂ ಸದಸ್ಯ ಎಸ್. ಕುಮಾರ್, ಪೌರಾಯುಕ್ತ ಬಿ.ಡಿ. ಬಸವರಾಜಪ್ಪ, ತಾಪಂ ಕಾರ್ಯನಿರ್ವಹಣಾಧಿಕಾರಿ ಎಂ. ಮಲ್ಲೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಸೋಮಶೇಖರಯ್ಯ, ಆರಕ್ಷಕ ವೃತ್ತ ನಿರೀಕ್ಷಕ ಪರಶುರಾಮಪ್ಪ ಮತ್ತು ಜೆ.ಜೆ.ತಿರುಮಲೇಶ್, ಅನೇಕ ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement