ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪರಿಸರ ಜಾಗೃತಿ ಜಾಥಾಕ್ಕೆ ಚಾಲನೆ

Lingaraj Badiger
Updated On : 17 Aug 2013, 11:14 am

ಕ.ಪ್ರ.ವಾರ್ತೆ, ಭದ್ರಾವತಿ, ಆ.16
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಆಶ್ರಯದಲ್ಲಿ ಯೋಜನೆಯ ಸ್ವಸಹಾಯ ಸಂಘದಿಂದ ನಡೆದ ಬೃಹತ್ ಜಾಥಾಕ್ಕೆ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಆರ್. ಕರುಣಾಮೂರ್ತಿ ಚಾಲನೆ ನೀಡಿದರು.
ಪರಿಸರ ಜಾಗೃತಿ ಅರಿವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಸಮಿತಿ ಅಧ್ಯಕ್ಷ ಜ್ಯೋತಿಶ್ರೀ ಉದ್ಘಾಟಿಸಿ ಮಾತನಾಡಿ, ನಮ್ಮ ನಾಡು, ನಡೆ, ನುಡಿ, ಪರಿಸರ ಕಾಳಜಿ, ಪರಸ್ಪರ ಸಹಕಾರ, ದುಶ್ಚಟ ಮುಕ್ತ ಸಮಾಜ, ಕುಟುಂಬದಲ್ಲಿ ಮಹಿಳೆಯರ ಪಾತ್ರ, ಮತ್ತಿತರ ವಿಷಯಗಳ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸಿದರಲ್ಲದೆ ನಾಗರಿಕ ಪ್ರಾಧಿಕಾರದ ಧ್ಯೇಯೋದ್ದೇಶ ಹಾಗೂ ಉಚಿತ ಕಾನೂನು ಸಲಹೆಗಳ ಬಗ್ಗೆ ಮಾಹಿತಿ ನೀಡಿದರು.
ಹೆಗ್ಗಡೆ ಪ್ರೇರೇಪಣೆ: ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಜಿ. ಆನಂದ್‌ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆಯು ನಾಗರಿಕರಿಗೆ ಪರಿಸರ ಸ್ವಚ್ಛತೆ, ಸುಂದರ ಜೀವನ ನಡೆಸಲು ಜಾಗೃತಿ ಮೂಡಿಸುವುದರ ಮೂಲಕ ಸಮಾಜದ ಜನರನ್ನು ಉನ್ನತ ಹಂತಕ್ಕೆ ಕೊಂಡೊಯ್ಯತ್ತಿದ್ದು, ಇದಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರೇರಣೆಯಾಗಿದ್ದಾರೆಂದು ತಿಳಿಸಿದರು.
ಜಾಗೃತಿ ಅರಿವು: ಸಂಸ್ಥೆಯ ಯೋಜನಾಧಿಕಾರಿ ದಿನೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಚ್ಛ, ಸಮೃದ್ಧ, ಸ್ವತಂತ್ರ ಭಾರತ ನಮ್ಮದಾಗಬೇಕು. ತಾಲೂಕಿನಲ್ಲಿ ಒಟ್ಟು 27 ಕಾರ್ಯಕ್ರಮಗಳು ಗ್ರಾಮೀಣ ಮಟ್ಟದಲ್ಲಿ ನಡೆಯುತ್ತಿದ್ದು, ಸುಮಾರು 6,500ಕ್ಕೂ ಹೆಚ್ಚು ನಾಗರಿಕರಿಗೆ ಜಾಗೃತಿಯ ಅರಿವು ಮೂಡಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸಿದ್ದಮಲ್ಲಪ್ಪ, ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಕಲ್ಪನ, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಎಂ. ಮಲ್ಲೇಶಪ್ಪ, ವಕೀಲರ ಸಂಘದ ಅಧ್ಯಕ್ಷ ಬಿ.ಎಸ್. ಮಹೇಶ್‌ಕುಮಾರ್, ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ಯೋಜನಾ ನಿರ್ದೇಶಕ ಸುಧೀರ್‌ಕುಮಾರ ಬಂಟ್ವಾಳ್ ಉಪಸ್ಥಿತರಿದ್ದರು. ಸಾಗರಿಕ ಪ್ರಾರ್ಥಿಸಿದರು. ನ್ಯಾಯವಾದಿ ಕೆ.ಎನ್. ಶ್ರೀಹರ್ಷ ಸ್ವಾಗತಿಸಿದರು. ಸಂಸ್ಥೆಯ ಮೇಲ್ವಿಚಾರಕಿ ಶಾಂತಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement