ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಮಾಜಿ ಸಚಿವ ಯಂಕಟಪ್ಪ ನಿಧನ

Rashmi Kasaragodu
Updated On : 17 Aug 2013, 12:03 pm

ಶಿಕಾರಿಪುರ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಂದೀಖಾನೆ ಹಾಗೂ ತೋಟಗಾರಿಕೆ ಖಾತೆ ಮಾಜಿ ಸಚಿವ ಕೆ. ಯಂಕಟಪ್ಪ (73) ಶುಕ್ರವಾರ ಮಧ್ಯಾಹ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಗುಂಡೂರಾವ್ ಅವರ ಸಚಿವ ಸಂಪುಟದಲ್ಲಿ ಬಂದೀಖಾನೆ ಹಾಗೂ ತೋಟಗಾರಿಕೆ ಸಚಿವರಾಗಿದ್ದ ಯಂಕಟಪ್ಪ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರೊಂದಿಗೆ ಆತ್ಮೀಯರಾಗಿ ಗುರುತಿಸಿಕೊಂಡಿದ್ದರು. ಅಧಿಕಾರದಿಂದ ವಿಮುಖರಾದ ನಂತರ ಕೃಷಿ ಕಾರ್ಯದಲ್ಲಿಯೇ ತಮ್ಮನ್ನು ತೊಡಗಿಸಿಕೊಂಡಿದ್ದರು. ಶ್ರಮ ಜೀವಿಯಾಗಿದ್ದ ಅವರು ಐಷಾರಾಮಿ ರಾಜಕಾರಣಿಗಳಿಗೆ ಮಾದರಿಯಾಗಿದ್ದರು. ಶನಿವಾರ ಮಧ್ಯಾಹ್ನ ತಾಲೂಕಿನ ಸ್ವಗ್ರಾಮ ಚುರ್ಚುಗುಂಡಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಯಂಕಟಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ರಾಘವೇಂದ್ರ, ಮುಖಂಡ ಗುರುಮೂರ್ತಿ ಸೇರಿದಂತೆ ಇತರೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement