ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ರಸ್ತೆ ದುರಸ್ತಿಗೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ

Lingaraj Badiger
Updated On : 17 Aug 2013, 11:02 am

ಶಿವಮೊಗ್ಗ: ನಗರದ ಬಹುತೇಕ ರಸ್ತೆಗಳು ಗುಂಡಿಗಳಿಂದ ತುಂಬಿದ್ದು, ಕೂಡಲೇ ಜಿಲ್ಲಾಡಳಿತ ಸರಿಪಡಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.
ಈ ಹಿಂದೆ ಸಾವಿರಾರು ಕೋಟಿ ರುಪಾಯಿ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ, ಡಾಂಬರೀಕರಣ ರಸ್ತೆ ಕಾಮಗಾರಿ ಮಾಡಲಾಗಿತ್ತು. ಆದರೆ, ರಸ್ತೆಗಳು ಇದೀಗ ಸಂಪೂರ್ಣ ಹಾಳಾಗಿದ್ದು, ಕೂಡಲೇ ದುರಸ್ತಿ ಕಾರ್ಯಕೈಗೊಳ್ಳಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.
ಅಸಮಾಧಾನ: ನಾಗರಿಕರು ಹಾಗೂ ವಿವಿಧ ಸಂಘ, ಸಂಘಟನೆಗಳು ನಗರದಲ್ಲಿ ಕಳಪೆ ಕಾಮಗಾರಿ, ಜೆಲ್ಲಿಪುಡಿ ಮಿಶ್ರಿತ ಸಿಮೆಂಟ್ ಕಾಂಕ್ರೀಟಿಕರಣ ಮಾಡಲಾಗಿದೆ ಎಂದು ದೂರು ನೀಡಿದ್ದವು, ಹೆಚ್ಚುವರಿ ಕಮೀಶನ್‌ಗಾಗಿ ಗುತ್ತಿಗೆದಾರರು ಕಾರ್ಯನಿರ್ವಹಿಸಿದ್ದಾರೆ ಎಂದು ಆರೋಪಿಸಿ, ನಾಗರಿಕ ಹಿತರಕ್ಷಣಾ ವೇದಿಕೆ, ಕಾಂಗ್ರೆಸ್ ಪಕ್ಷ ಸೇರಿದಂತೆ ವಿವಿಧ ಸಂಘಟನೆಗಳು ಕಳಪೆ ಕಾಮಗಾರಿಯನ್ನು ವಿರೋಧಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾರ್ಯಕರ್ತರು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ತರಾತುರಿಯಲ್ಲಿ ಮಳೆಗಾಲದಲ್ಲೂ ಡಾಂಬರೀಕರಣ ಮಾಡಿದ್ದು, ಲೋಕೋಪಯೋಗಿ ಇಲಾಖೆ, ಸೂಡಾ, ತುಂಗಾಮೇಲ್ದಂಡೆ ಯೋಜನೆ, ನಗರಸಭೆಯಿಂದ ಸರ್ಕಾರದ ಹಾಗೂ ಕೇಂದ್ರ ಸರ್ಕಾರದ ಪ್ರಕೃತಿ ವಿಕೋಪ ಬರ ಪರಿಹಾರ ಕಾಮಗಾರಿ ಮುತ್ತಿತರ ಯೋಜನೆಯಡಿ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಹಣವನ್ನು ರಸ್ತೆಗೆ ಸುರಿದಿದೆ. ಆದರೆ, ಇದರ ಉಪಯೋಗ ಮಾತ್ರ ಸಾರ್ವಜನಿಕರಿಗೆ ಸಿಗದಂತಾಗಿದೆ ಎಂದು ಕಾರ್ಯಕರ್ತರು ಹೇಳಿದರು.
ಮನವಿ ನೀಡುವ ವೇಳೆ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಕೆ. ದೇವೇಂದ್ರಪ್ಪ, ನಗರಾಧ್ಯಕ್ಷ ಹುಸೇನ್, ಈಶ್ವರ್, ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಮಧುಸೂದನ್, ಜಿಲ್ಲಾಧ್ಯಕ್ಷ ಚೇತನ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement