ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಗುಣಮಟ್ಟದ ಶಿಕ್ಷಣಕ್ಕೆ ತರಬೇತಿ ಅಗತ್ಯ

Mainashree
Updated On : 18 Aug 2013, 11:46 am

ನಾಯಕನಹಟ್ಟಿ: ಶಾಲೆಯ ಸ್ಥಿತಿಗತಿ ಮಕ್ಕಳ ಕಲಿಕೆಯಲ್ಲಿ ಪ್ರಭಾವ ಬೀರುತ್ತದೆ ಎಂದು ಇಎಲ್‌ಐಎಲ್‌ನ ಮುಖ್ಯಸ್ಥೆ ಅಂಬಿಕಾ ಸಾವಿತ್ರಿ ಹೇಳಿದರು.
ಮನುಮೈನಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಇಂದಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ತರಬೇತಿಯು ಅತ್ಯವಶ್ಯಕವಾಗಿದ್ದು, ಮಕ್ಕಳ ಕಲಿಕೆಯಲ್ಲಿ ಗ್ರಾಮದ ಅಭಿವೃದ್ಧಿ ಮುನ್ಸೂಚನೆಯಾಗಿರುತ್ತದೆ. ಮಗುವಿನ ಶೈಕ್ಷಣಿಕ ಮತ್ತು ಬೌದ್ಧಿಕ ಬೆಳವಣಿಗೆಯಿಂದ ಉತ್ತಮ ನಾಯಕತ್ವವನ್ನ ರೂಪಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.
ಶಾಲಾ ನಾಯಕತ್ವ: ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಪೋಷಕರು ಈ ಒಂದು ನಾಯಕತ್ವದ ತರಬೇತಿಯನ್ನು ಪಡೆದುಕೊಳ್ಳುವುದು ಅತ್ಯವಶ್ಯಕ ಎಂದು ತಿಳಿಸಿದರು.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಸಂಯೋಜಕ ಚಂದ್ರಣ್ಣ, ಬಿ.ಆರ್.ಪಿ. ಗಳಾದ ಸೋಮನಾಥ್, ಮಲ್ಲಿಕಾರ್ಜುನ್, ಶಾಲೆಯ ಮುಖ್ಯ ಶಿಕ್ಷಕಿ ಅರುಂಧತಿ, ಸಿ.ಆರ್.ಪಿ. ಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement