ಪೈಕಾ ಗ್ರಾಮೀಣ ಕ್ರೀಡಾಕೂಟ ಉದ್ಘಾಟನೆ
ಕ.ಪ್ರ.ವಾರ್ತೆ ಹೊಸದುರ್ಗ ಆ 17
ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಪೈಕಾ ಗ್ರಾಮೀಣ ಕ್ರೀಡಾಕೂಟ ಶನಿವಾರ ನಡೆಯಿತು.
ಪಿಎಸ್‌ಐ ನಾಗೇಂದ್ರ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕ್ರೀಡೆಗಳ ತರಬೇತಿ ಕೊರತೆ ಹಿನ್ನೆಲೆಯಲ್ಲಿ ಹಲವು ಪ್ರತಿಭೆಗಳು ಕಮರಿ ಹೋಗಿವೆ ಎಂದು ಹೇಳಿದರು.
ಸಹೋದರ ಭಾವನೆ: ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲ ಎಂ.ಬಿ. ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಕ್ರೀಡಾಕೂಟಗಳಿಂದ ಮಕ್ಕಳಲ್ಲಿ ಸಹೋದರ ಭಾವನೆ ಮೂಡಿಸಲು ಸಹಕಾರಿಯಾಗುತ್ತದೆ ಎಂದರು.
ಕ್ರೀಡಾಕೂಟ ಉದ್ಘಾಟಿಸಿದ ಬೆಸ್ಕಾಂ ಎಇಇ ತಿರುಪತಿ ನಾಯ್ಕ್ ಮಾತನಾಡಿ, ಸೋಲು ಗೆಲವಿನ ಸೋಪಾನ ಎಲ್ಲರೂ ಸೋಲನ್ನು ಮುಂದಿನ ಗೆಲುವಿಗೆ ದಾರಿಯನ್ನಾಗಿಸಿಕೊಳ್ಳಬೇಕು ಎಂದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಚೆಲುವರಾಜ್, ಸರ್ಕಾರಿ ಪ್ರೌಢಶಾಲೆಯ ಮು.ಶಿ. ಜಗದೀಶ್, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಹಂತೇಶ್, ದೈಹಿಕ ಶಿಕ್ಷಕಿ ಅನ್ನಪೂರ್ಣಮ್ಮ, ದಿವಾಕರ್ ಮೊದಲಾದವರು ಹಾಜರಿದ್ದರು.