ಇಂದು ಐತಿಹಾಸಿಕ ಪರಂಪರೆ ಉಳಿಸಿ ಸಪ್ತಾಹ
ಶಿವಮೊಗ್ಗ: ನಗರದ ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಆ.19ರಂದು ಮಧ್ಯಾಹ್ನ 12ಗಂಟೆಗೆ ಐತಿಹಾಸಕ ಪರಂಪರೆ ಉಳಿಸಿ ಸಪ್ತಾಹದ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕರ್ನಾಟಕ ಇತಿಹಾಸ ಅಕಾಡೆಮಿಯ ಜಿಲ್ಲಾ ಘಟಕ ಹಾಗೂ ಡಿ.ವಿ.ಎಸ್. ಕಾಲೇಜಿನ ಇತಿಹಾಸ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಕುವೆಂಪು ವಿ.ವಿ. ಯ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರಾಜಾರಾಮ ಹೆಗಡೆ ಅವರು ಶಿವಮೊಗ್ಗ ಜಿಲ್ಲೆಯ ಸ್ಮಾರಕಗಳು-ಸಂರಕ್ಷಣೆ ವಿಷಯದ ಕುರಿತು ಉಪನ್ಯಾಸ ನೀಡುವರು.
ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಟಿ.ಎಸ್. ಗೋಪಾಲ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ಇತಿಹಾಸ ಅಕಾಡೆಮಿಯ ಜಿಲ್ಲಾ ಸಂಚಾಲಕ ಡಾ. ಬಾಲಕೃಷ್ಣ ಹೆಗಡೆ, ಡಿ.ವಿ.ಎಸ್. ಪ.ಪೂ.ಕಾಲೇಜಿನ ಡಾ.ಎಸ್.ಜಿ. ಸಾಮಗ, ಇತಿಹಾಸ ವೇದಿಕೆಯ ಸಂಚಾಲಕ ಪ್ರೊ. ಕೆ.ಜಿ. ವೆಂಕಟೇಶ್ ಉಪಸ್ಥಿತರಿರುವರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಮಂಜುನಾಥ ಅಧ್ಯಕ್ಷತೆ ವಹಿಸುವರು.